ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲದ ಸಿಲಿಂಡರ್ ಕೊರತೆ ಇಲ್ಲ. ಬುಕಿಂಗ್ ಮಾಡಿದವರಿಗೆ ನಿಯಮಾನುಸಾರ ಸಿಲಿಂಡರ್ ಪೂರೈಸಲಾಗುತ್ತದೆ. ಗ್ರಾಹಕರಲ್ಲಿ ಯಾವುದೇ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ ಹೇಳಿದರು.

ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ವದಂತಿಗಳಿಗೆ ಒಳಗಾಗಿ ಅಗತ್ಯ ಒಲ್ಲದಿದ್ದರೂ ಬುಕಿಂಗ್ ಮಾಡುವುದರಿಂದ ಅನಿಲ ವಿತರಣೆಗೆ ಒತ್ತಡ ಉಂಟಾಗುತ್ತಿದೆ’ ಎಂದರು.

ಗೃಹ ಬಳಕೆಯ ಅನಿಲದ ಸಿಲಿಂಡರ್ ಬುಕಿಂಗ್ ಸಂಬಂಧ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಒಂದು ಸಿಲಿಂಡರ್ ಹೊಂದಿರುವವರು 25 ದಿನಕ್ಕೊಮ್ಮೆ, ಎರಡು ಸಿಲಿಂಡರ್ ಹೊಂದಿರುವವರು 35 ದಿನಕ್ಕೊಮ್ಮೆ ಹಾಗೂ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಹೊಂದಿರುವ ಫಲಾನುಭವಿಗಳು 45 ದಿನಗಳಿಗೊಮ್ಮೆ ಮಾತ್ರ ಸಿಲಿಂಡರ್ ಬುಕ್ ಮಾಡಲು ಅವಕಾಶವಿದೆ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಸಿಲಿಂಡರ್ ಕೊರತೆ ಇಲ್ಲದಿದ್ದರೂ ಕೆಲವರು ಅನವಶ್ಯಕವಾಗಿ ಮುಂಗಡ ಬುಕಿಂಗ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಸರಬರಾಜು ಮೇಲಿನ ಒತ್ತಡ ಹೆಚ್ಚಾಗುತ್ತಿದೆ. ಇತರ ಗ್ರಾಹಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಇರುವಾಗ ಮಾತ್ರ ಸಿಲಿಂಡರ್ ಬುಕ್ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಯೋಗಾನಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಶ್ವತ್ಥಬಾಬು, ಗ್ಯಾಸ್ ಏಜೆನ್ಸಿಗಳ ಮಾಲೀಕರು ಹಾಗೂ ವಿತರಕರು ಸಭೆಯಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-126-227274985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.