ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವೆಡೆ ಉತ್ತಮ ಮಳೆಯಾಗಿದ್ದು, ಮಧ್ಯಾಹ್ನದ ನಂತರ ಜಡಿ ಮಳೆ ಸುರಿದು ವಾತಾವರಣವನ್ನು ಸಂಪೂರ್ಣ ತಂಪಾಗಿಸಿತು.

ಮಧ್ಯಾಹ್ನ ವೇಳೆಗೆ ಆರಂಭವಾದ ಮಳೆ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರವಾಗಿ ಸುರಿಯಿತು. ಕೆಲವು ರಸ್ತೆಗಳಲ್ಲಿ ನೀರು ಹರಿಯಿತು. ನೀರಿನ ನಡುವೆ ವಾಹನಗಳು ಸಂಚರಿಸಿದವು.

ಸಂಜೆ ವೇಳೆಗೆ ಮತ್ತೆ ಆರಂಭವಾದ ಮಳೆ ಸೋನೆ ಮಳೆಯಂತೆ ನಿರಂತರವಾಗಿ ಸುರಿಯಿತು. ಮೂಡಿಗೆರೆ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಸಂಜೆ ನಿರಂತರವಾಗಿ ಮಳೆ ಸುರಿಯಿತು.

ಜಿಟಿಜಿಟಿ ಮಳೆ ನಿರಂತರವಾಗಿ ಸುರಿದಿದ್ದರಿಂದ ವಾತಾವರಣ ಸಂಪೂರ್ಣವಾಗಿ ಬದಲಾಯಿತು. ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಜನ ತಂಪಾದ ವಾತಾವರಣದಿಂದ ಸಂತಸಗೊಂಡರು.

ನರಸಿಂಹರಾಜಪುರ: ಪಟ್ಟಣವೂ ಸೇರಿದಂತೆ ಸುತ್ತಮುತ್ತಲ ಕೆಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಜೋರಾಗಿ ಮಳೆ ಸುರಿಯಿತು.

ಮಂಗಳವಾರ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಬಂದಿತ್ತು. ನಂತರ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ 3.30ರ ವೇಳೆಗೆ ಇದ್ದಕ್ಕಿದ್ದಂತೆ ಮೋಡಕವಿದ ವಾತಾವರಣವುಂಟಾಗಿ ಸಾಧಾರಣ ಮಳೆ ಸುರಿಯಿತು. ಪುನಃ 4.30ರ ವೇಳೆಗೆ ಆರಂಭವಾದ ಮಳೆ ರಭಸವಾಗಿ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಶಾಲೆ ಬಿಡುವ ಸಮಯದಲ್ಲಿ ಮಳೆ ಬಂದಿದ್ದರಿಂದ ಮಕ್ಕಳು ಮನೆಗೆ ತಲುಪಲು ಪರದಾಡುವಂತಾಯಿತು. ಸಂಜೆ 7ರವರೆಗೂ ತುಂತುರು ಮಳೆ ಮುಂದುವರೆದಿತ್ತು.

ಬಾಳೆಹೊನ್ನೂರು: ಪಟ್ಟಣದ ಸುತ್ತಮುತ್ತ ಮಂಗಳವಾರ ಸಂಜೆ ಗುಡುಗು, ಮಿಂಚು ಸಹಿತ ಜಿಟಿ ಜಿಟಿ ಮಳೆ ಆರಂಭವಾಗಿದೆ.

ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದರೂ ಸೆಕೆ ಮುಂದುವರೆದಿತ್ತು. ಸಂಜೆ ವೇಳೆ ಸುರಿದ ಮಳೆ ತಂಪೆರೆಯಿತು. ನಂತರ ಮೋಡದ ವಾತಾವರಣ ಮುಂದುವರೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-698116065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.