ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿಯ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಹಾಗೂ ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಡೆಯುತ್ತಿರುವ ನಿವೇಶನ ರಹಿತರ ಹೋರಾಟವು ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.

ಕಳೆದ ಶುಕ್ರವಾರ ಮಣ್ಣಿಕೆರೆ ಗ್ರಾಮದಲ್ಲಿ ಟೆಂಟ್ ನಿರ್ಮಿಸಿ ಹೋರಾಟ ಪ್ರಾರಂಭಿಸಿದ ನಿವೇಶನ ರಹಿತರು, ನಾಲ್ಕು ದಿನಗಳಿಂದ ಸ್ಥಳದಲ್ಲಿಯೇ ವಾಸ್ತವ್ಯ ಹೂಡಿ ಧರಣಿ ನಡೆಸುತ್ತಿದ್ದು, ಸೋಮವಾರ ವಿವಿಧ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸಿರುವ ಟಿಯುಸಿಐ ಜಿಲ್ಲಾಧ್ಯಕ್ಷ ಕೆ.ಕೆ.ಕೃಷ್ಣಪ್ಪ ಮಾತನಾಡಿ, ‘ತಾಲ್ಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ನಿವೇಶನಕ್ಕಾಗಿ 3.20 ಎಕರೆ ಸರ್ಕಾರಿ ಭೂಮಿ ಕಾಯ್ದಿರಿಸಲಾಗಿದೆ. ಆದರೆ ಇದುವರೆಗೆ ಫಲಾನುಭವಿಗಳ ಪಟ್ಟಿ ತಯಾರಿಸಿಲ್ಲ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಹೋಗಿದ್ದು ಬಿಟ್ಟರೆ, ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ನಿವೇಶನ ನೀಡುವುದನ್ನು ಬಿಟ್ಟು ಟೆಂಟ್ ನಿರ್ಮಿಸಿರುವ ನಿವೇಶನ ರಹಿತರನ್ನು ಹೊರ ಹಾಕಲು ಯತ್ನಿಸಿದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದರು.

ಎಸ್ಡಿಪಿಐ ತಾಲ್ಲೂಕು ಅಧ್ಯಕ್ಷ ಅಂಗಡಿ ಚಂದ್ರು, ಭೀಮ ಆರ್ಮಿಯ ಹಾದಿಗೆ ಜಯಕುಮಾರ್, ಖಾಲಿದ್, ಚಂದ್ರು, ನಾಗೇಶ್ ಸಾಲುಮರ, ಆದಾಮ್, ಹನೀಫ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-126-929034501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.