ಚಿಕ್ಕಮಗಳೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಬೆಳಕು ಚೆಲ್ಲಲು ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ಹೇಳಿದರು.

ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿ ಸಿದ್ದ ‘ತಿಂಗಳ ಅತಿಥಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪತ್ರಿಕೋದ್ಯಮಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ. ಪತ್ರಿಕೋದ್ಯಮ ಪ್ರಜ್ಞಾವಂತರ ಸಮೂಹವಾಗಿದೆ. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಮಾಧ್ಯಮ ರಂಗ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದರು.

ಸ್ವಾತಂತ್ರ್ಯ ನಂತರದ ದಿನಗಳಲ್ಲಿ ದೇಶದಲ್ಲಿ ಪ್ರಮುಖ ಪಾತ್ರವನ್ನು ಮಾಧ್ಯಮರಂಗ ವಹಿಸಿದೆ. ಜನಾಭಿಪ್ರಾಯ ರೂಪಿಸಬೇಕಾದರೆ ಮಾಧ್ಯಮ ಮುಖ್ಯ. ಜಿಲ್ಲೆಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

‘ಡಿಜಿಟಲ್ ಯುಗದಲ್ಲೂ ಮಾಧ್ಯಮಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಜವಾಬ್ದಾರಿ ಮತ್ತು ಸಮಾಜ ತಿದ್ದುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿದ್ದು, ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವವನ್ನು ಮಾಧ್ಯಮಗಳು ರೂಢಿಸಿಕೊಳ್ಳಬೇಕು’ ಎಂದರು.

ಆಹಾರ, ಶಿಕ್ಷಣ, ಆರೋಗ್ಯ ಯೋಜನೆಗಳು ಜನರಿಗೆ ತಲುಪುತ್ತಿವೆ. ಜನ ನೀಡಿದ ಅಭಿಪ್ರಾಯಗಳನ್ನು ನೋಡಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿಯ ಮಾದರಿಯಾಗಿ ಪತ್ರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೆಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಉಮೇಶಕುಮಾರ್, 18 ವರ್ಷಗಳಿಂದ ನಗರದಲ್ಲಿ ಪ್ರೆಸ್ ಕ್ಲಬ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಾಡಿಗೆ ಕಟ್ಟಡದಲ್ಲಿದ್ದು, ನಿವೇಶನ ಗುರುತಿಸಲಾಗಿದೆ. ಆದಷ್ಟು ಬೇಗ ನಿವೇಶನವನ್ನು ಚಿಕ್ಕಮಗಳೂರು ಪ್ರೆಸ್ ಕ್ಲಬ್ಗೆ ಹಸ್ತಾಂತರ ಮಾಡಬೇಕು ಎಂದು ಮನವಿ ಮಾಡಿದರು.

ಪ್ರೆಸ್ ಕ್ಲಬ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರೆಸ್ ಕ್ಲಬ್ ಅಧ್ಯಕ್ಷ ಸಿ.ಡಿ.ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಗೋಪಿ, ಖಜಾಂಚಿ ಪುನೀತ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-19722721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.