ಚಿಕ್ಕಮಗಳೂರು: ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಆದರೆ, ಸಿಬ್ಬಂದಿ ಕೊರತೆ ಕಾಲೇಜನ್ನು ಕಾಡುತ್ತಿದೆ. ಮಂಜೂರಾಗಿರುವ ಹುದ್ದೆಗಳಲ್ಲಿ ಅರ್ಧಕ್ಕೂ ಕಡಿಮೆ ಬೋಧನಾ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿಗೆ ರಾಜ್ಯ ಸರ್ಕಾರ 2020ರಲ್ಲಿ ಅನುಮೋದನೆ ನೀಡಿದ್ದು, ನಗರದ ಹೊರ ವಲಯದ ತೇಗೂರು ಗ್ರಾಮದ ಬಳಿ 40 ಎಕರೆ 11 ಗುಂಟೆ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. 2022–23ನೇ ಸಾಲಿನಿಂದ 150 ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದ್ದು, ನಂತರ ಪ್ರತಿ ವರ್ಷ 150 ಸೀಟುಗಳಂತೆ ಮೂರನೇ ಬ್ಯಾಚ್ ಈಗ ಚಾಲ್ತಿಯಲ್ಲಿದೆ. ಶೀಘ್ರವೇ 2025–26ರ ಹೊಸ ಬ್ಯಾಚ್ ಆರಂಭವಾಗಲಿದೆ.

ಸಂಸ್ಥೆಯ ಕಟ್ಟಡ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಶೇ 97ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ₹454.94 ಕೋಟಿ ಮೊತ್ತದ ಯೋಜನೆಯ ಕಾಮಗಾರಿ 2024ರ ಜನವರಿ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ, ಕಾಮಗಾರಿ ಇನ್ನೂ ಅಂತಿಮಗೊಂಡಿಲ್ಲ. ಸೆಪ್ಟೆಂಬರ್ನಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಇದರ ನಡುವೆ ಸಿಬ್ಬಂದಿ ಕೊರತೆ ಸಮಸ್ಯೆಯೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಕಾಡುತ್ತಿದೆ. 126 ಬೋಧಕ ಹುದ್ದೆಗಳನ್ನು ಸೃಜಿಸಲಾಗಿದೆ. ಸದ್ಯ 59 ಹುದ್ದೆಗಳ ಭರ್ತಿಯಾಗಿದ್ದು, 67 ಹುದ್ದೆಗಳು ಖಾಲಿ ಇವೆ. ಇನ್ನು ಬೋಧಕೇತರ 113 ಸಿಬ್ಬಂದಿ ಮಂಜೂರಾಗಿದ್ದು, 53 ಹುದ್ದೆಗಳು ಭರ್ತಿಯಾಗಿದ್ದರೆ 60 ಹುದ್ದೆಗಳು ಖಾಲಿ ಇವೆ.

ಪ್ರಮುಖವಾಗಿ 19 ಪ್ರಾಧ್ಯಾಪಕರ ಹುದ್ದೆಗಳಲ್ಲಿ ಮೂವರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. 26 ಸಹ ಪ್ರಾಧ್ಯಾಪಕರ ಪೈಕಿ 11 ಹುದ್ದೆಗಳು, 43 ಸಹಾಯಕ ಪ್ರಾಧ್ಯಾಪಕರ ಪೈಕಿ 25 ಹುದ್ದೆಗಳು ಭರ್ತಿಯಾಗಿವೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಧಾನ ಪರಿಷತ್ನಲ್ಲಿ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ‘ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಎರಡು ಬಾರಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇರೆಗೆ ಗುತ್ತಿಗೆ ಅಥವಾ ಕಾಯಂ ನೇಮಕ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಫೆಬ್ರುವರಿಯಲ್ಲಿ ಕಾಮಗಾರಿ ಪೂರ್ಣ

ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಸೆಪ್ಟೆಂಬರ್ ಅಂತ್ಯದಲ್ಲಿ ಪೂರ್ಣಗೊಂಡರೆ ಪಕ್ಕದಲ್ಲೇ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ 2026ರ ಫೆಬ್ರುವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಶಾಸಕ ಎಚ್.ಡಿ.ತಮ್ಮಯ್ಯ ವಿಧಾನಸಭೆಯಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಸಚಿವ ಡಾ.ಶರಣ ಪ್ರಕಾಶ ಪಾಟೀಲ ‘ವೈದ್ಯಕೀಯ ಕಾಲೇಜಿಗೆ ಹೊಂದಿಕೊಂಡಂತೆ ಒಪಿಡಿ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಎಂಸಿಎಚ್ ಬ್ಲಾಕ್ ವೈದ್ಯರ ವಸತಿಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ₹174 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಶೇ 73ರಷ್ಟು ಪೂರ್ಣಗೊಂಡಿದೆ. ₹53.50 ಕೋಟಿ ಬಿಡುಗಡೆಗೆ ಬಾಕಿ ಇದೆ. ಫೆಬ್ರುವರಿ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದ್ದಾರೆ. ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಶೇ 97ರಷ್ಟು ಪೂರ್ಣಗೊಂಡಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ₹454.94 ಕೋಟಿ ಮೊತ್ತದ ಯೋಜನೆಯಲ್ಲಿ ₹21 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.