ಕಳಸ: ಮೇರುತಿಗುಡ್ಡಕ್ಕೆ ರಸ್ತೆ ನಿರ್ಮಾಣಕ್ಕೆ ಪರಿಸರವಾದಿಳು ವಿರೋಧ ವ್ಯಕ್ತಪಡಿಸಿರುವುದನ್ನು ಹೊರನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೃಷಭರಾಜ್ ಖಂಡಿಸಿದ್ದಾರೆ.

‘ಮೇರುತಿ ಗುಡ್ಡದ ತುದಿಯಲ್ಲಿ ಗಣಪತಿ ದೇವಸ್ಥಾನವಿದೆ. ಪ್ರವಾಸಿಗರು ಮತ್ತು ಭಕ್ತರು ಇಲ್ಲಿಗೆ ಚಾರಣಕ್ಕೆ ಮತ್ತು ದೇವರ ದರ್ಶನಕ್ಕೆ ಬರುತ್ತಾರೆ. 2,500 ಮೀಟರ್ ರಸ್ತೆ ನಿರ್ಮಾಣಕ್ಕೆ ವಿಜಯಾ ಎಸ್ಟೇಟ್ ಮಾಲೀಕರು ಜಾಗ ಬಿಟ್ಟು ಕೊಟ್ಟಿದ್ದಾರೆ. ಉಳಿದ 300 ಮೀಟರ್ ಜಾಗ ಮಾತ್ರ ಅರಣ್ಯ ಇಲಾಖೆಗೆ ಸೇರುತ್ತದೆ. ಈ ಜಾಗದಲ್ಲೂ ಮರಳಿಲ್ಲ’ ಎಂದು ವೃಷಭರಾಜ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

2,500 ಮೀಟರ್ ಉದ್ದದ ರಸ್ತೆ ಕಾಮಗಾರಿ ಮುಗಿದಿದ್ದು, 300 ಮೀಟರ್ ಕೆಲಸ ಮಾತ್ರ ಬಾಕಿ ಇದೆ. ಪ್ರತಿವರ್ಷವೂ ಇಲ್ಲಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ವನ್ಯ ಮೃಗಗಳು, ವನ್ಯ ಸಂಪತ್ತು ನಾಶ ಆಗುತ್ತಿದೆ. ಇದನ್ನು ತಪ್ಪಿಸಲು ಅರಣ್ಯ ಇಲಾಖೆಗೂ ಅನುಕೂಲ ಆಗುತ್ತದೆ ಎಂದು ತಿಳಿಸಿದ್ದಾರೆ.

ಈ ರಸ್ತೆ ನಿರ್ಮಾಣಕ್ಕೆ ಹಿಂದೆಯೇ ಹೊರನಾಡು ಪಂಚಾಯಿತಿಯಲ್ಲಿ ನಿರ್ಣಯ ಅಂಗೀಕರಸಲಾಗಿತ್ತು. ಅರಣ್ಯ ಇಲಾಖೆ ಒಬ್ಬ ಚಾರಣಿಗನಿಗೆ ₹300 ಶುಲ್ಕ ವಿಧಿಸುತ್ತಿದ್ದರೂ ಯಾವುದೇ ಸೌಲಭ್ಯ ಕೊಡುತ್ತಿಲ್ಲ. 300 ಮೀಟರ್ ಉಳಿಕೆ ರಸ್ತೆ ಕಾಮಗಾರಿ ನಡೆದರೆ ಈ ಪ್ರದೇಶಕ್ಕೆ ಕುಡಿಯುವ ನೀರು, ವಿದ್ಯುತ್ ಕೂಡ ಪೂರೈಸಬಹುದಾಗಿದೆ. ಈ ಕಾಮಗಾರಿಯಿಂದ ಯಾವುದೇ ಹಾನಿ ಆಗುವುದಿಲ್ಲ. ಈ ಎಲ್ಲ ಅಂಶ ಗಮನಿಸಿ ರಸ್ತೆ ಕಾಮಗಾರಿ ನಡೆಸಬೇಕು ಎಂದು ವೃಷಭರಾಜ್ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-1351818097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.