ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವೆಡೆ ಸಾಧಾರಣ ಮಳೆಯಾಗಿದ್ದು, ಮಲೆನಾ ಡಿನಲ್ಲಿ ಮುಂಗಾರಿನ ವಾತಾವರಣ ನಿರ್ಮಾಣವಾಗಿದೆ.

ಮಂಗಳವಾರದಿಂದ ಇಡೀ ಜಿಲ್ಲೆಯಲ್ಲಿ ವಾತಾವರಣ ಬದಲಾಗಿದೆ. ಬುಧವಾರ ಬೆಳಿಗ್ಗೆಯಿಂದಲೂ ಮೋಡ ಮುಸುಕಿದ ವಾತಾವರಣ ಇತ್ತು. ಮಧ್ಯಾ ಹ್ನದ ವೇಳೆಗೆ ಮಲೆನಾಡು ಭಾಗದಲ್ಲಿ ಆಗಾಗ ಸೋನೆ ಮಳೆ ಸುರಿಯಿತು.

ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಬಾಳೆಹೊನ್ನೂರು, ಆಲ್ದೂರು, ಶೃಂಗೇರಿ, ಕೊಪ್ಪ, ತರೀಕೆರೆ, ನರಸಿಂಹರಾಜಪುರ ಸೇರಿ ಹಲವೆಡೆ ಸಾಧಾರಣ ಮಳೆಯಾಯಿತು.

ಉತ್ತಮ ಮಳೆ: ಕಡೂರು ಪಟ್ಟಣ ಸೇರಿದಂತೆ ಸುತ್ತಮುತ್ತ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ.

ಪಟ್ಟಣದಲ್ಲಿ ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ಸಾಧಾರಣ ಮಳೆಯಾಗುತ್ತಿದ್ದು, ಬುಧವಾರ ಸಂಜೆಯಿಂದಲೇ ತಾಲ್ಲೂಕಿನ ಹಲವೆಡೆ ಉತ್ತಮ ಮಳೆಯಾಗುತ್ತಿರುವುದು ರೈತಾಪಿ ವರ್ಗದಲ್ಲಿ ಉತ್ತಮ ಮುಂಗಾರಿನ ಭರವಸೆ ಮೂಡಿಸಿದೆ. ಭೂಮಿ ಹಸನಾಗಿಸಲು ಹುರುಪು ತುಂಬಿದೆ. ಮೋಡ ಕವಿದ ವಾತಾವರಣದ ನಡುವೆ ಧಗೆಯ ಬೇಗೆ ಅನುಭವಿಸುತ್ತಿದ್ದ ನಾಗರಿಕರಿಗೆ ತಂಪಾದ ವಾತಾವರಣದ ಅನುಭವ ನೀಡಿದೆ.

ಜೋರಾದ ಮಳೆ: ಶೃಂಗೇರಿ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಮಳೆಯಾಗಿದ್ದು, ಬುಧವಾರ ಬೆಳಿಗ್ಗೆ ಸುರಿದ ಮಳೆಯಿಂದ ತುಂಗಾನದಿಯ ನೀರಿನ ಮಟ್ಟ ಏರಿಕೆಯಾಗಿದೆ.

ತಾಲ್ಲೂಕಿನ ಕೆರೆಕಟ್ಟೆ, ಕಿಗ್ಗಾ, ನೆಮ್ಮಾರ್, ಕಾವಡಿ, ಅಡ್ಡಗದ್ದೆ, ತೆಕ್ಕೂರು, ವೈಕುಂಠಪುರ, ಕುಂಚೇಬೈಲ್, ಬೇಗಾರ, ಬಿದರಗೋಡು, ಹೊಳೆಕೊಪ್ಪ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-126-408094526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.