ಚಿಕ್ಕಮಗಳೂರು: ಮುಂಗಾರು ಪೂರ್ವ ಮಳೆ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆಯಾಗಿದೆ. ಮಳೆಗಾಲ ಆರಂಭ ಆಗಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಜಿಲ್ಲೆಯಲ್ಲಿ 164 ಪ್ರದೇಶಗಳನ್ನು ದುರ್ಬಲ ಪ್ರದೇಶವೆಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ತಿಳಿಸಿದರು.

ಮೂಡಿಗೆರೆ ತಾಲ್ಲೂಕಿನಲ್ಲಿ 17, ನರಸಿಂಹರಾಜಪುರ 12, ಚಿಕ್ಕಮಗಳೂರು 11, ಕೊಪ್ಪ 7, ತರೀಕೆರೆ 1, ಶೃಂಗೇರಿ 9, ಕಳಸ 17 ಕಾಳಜಿ ಕೇಂದ್ರಗಳಿಗೆ ಸ್ಥಳ ಗುರುತಿಸಲಾಗಿದೆ. ಇಂಧನ ಚಾಲಿತ 11 ಬೋಟ್ಗಳು, ಹಗ್ಗ, ಜೀವ ರಕ್ಷಕ ಜಾಕೆಟ್ಗಳನ್ನು ನೀಡಲಾಗಿದೆ ಎಂದು ಬುಧವಾರ ಹೇಳಿದರು.

ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಾರ್ಚ್ 1ರಿಂದ ಮೇ 31ರವರೆಗೆ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 165.6 ಮಿ.ಮೀಟರ್, ಕಡೂರು 120 ಮಿ.ಮೀ, ಕೊಪ್ಪ 223.7 ಮಿ.ಮೀ, ಮೂಡಿಗೆರೆ 178.5 ಮಿ.ಮೀ, ನರಸಿಂಹರಾಜಪುರ 138.3 ಮಿ.ಮೀ, ಶೃಂಗೇರಿ 229.8 ಮಿ.ಮೀ, ತರೀಕೆರೆ 85.5 ಮಿ.ಮೀ, ಅಜ್ಜಂಪುರ 51.5 ಮಿ.ಮೀ, ಕಳಸ 267 ಮಿ.ಮೀಟರ್ ಮಳೆಯಾಗಿದೆ. 159.5 ಮಿ.ಮೀಟರ್ ವಾಡಿಕೆ ಮಳೆ ಆದರೆ 153.2 ಮಿ.ಮೀ ಮಳೆಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತುರ್ತು ಕರೆಗಳ ಕಂಟ್ರೋಲ್ ರೂಂ ತೆರೆಯಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ ಸಂಖ್ಯೆ 08262238950, ಜಿಲ್ಲಾ ಪೊಲೀಸ್ ಕಚೇರಿ ಸಂಖ್ಯೆ 9480805100, ಮೆಸ್ಕಾಂ ಕಂಟ್ರೋಲ್ ಸಂಖ್ಯೆ 9448289543/9448289524 ಎಂದು ಅವರು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ. ತಿರುಮಲೇಶ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಮಂಗಳಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-126-2000509499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.