ಮೂಡಿಗೆರೆ: ಪಟ್ಟಣ ಪಂಚಾಯಿತಿ ಅಧಿಕಾರಿಗಳು ಪಟ್ಟಣದ ಘನತ್ಯಾಜ್ಯ ಸಂಗ್ರಹ ಮತ್ತು ನಿರ್ವಹಣೆ ಮಾಡುವಲ್ಲಿ ವಿಫಲಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದ ನಿವಾಸಿಗಳು ಹಾಗೂ ರೈತ ಮುಖಂಡರು ಸೋಮವಾರ ಪಟ್ಟಣ ಪಂಚಾಯಿತಿ ಎದುರು ಕಸ ಸುರಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಆರ್. ದುಗ್ಗಪ್ಪಗೌಡ ಮಾತನಾಡಿ, ‘ಪಟ್ಟಣದಲ್ಲಿ ಜನರು ಎಲ್ಲೆಂದರಲ್ಲಿ ಕಸ ಹಾಕುತ್ತಿದ್ದಾರೆ. ಪಟ್ಟಣದ ಕಸವನ್ನು ಗ್ರಾಮೀಣ ಭಾಗಕ್ಕೂ ತೆಗೆದುಕೊಂಡು ಹೋಗಿ ಸುರಿಯುತ್ತಿದ್ದಾರೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಸಂಗ್ರಹ ವಾಹನಗಳು ಬರುತ್ತಿಲ್ಲ. ರಸ್ತೆ ಬದಿಯಲ್ಲಿ ಜನರು ಕಸ ಹಾಕುತ್ತಿರುವುದರಿಂದ ಮಳೆ ಬಂದಾಗ ಕಸ ಕುಡಿಯುವ ನೀರಿಗೆ ಬಳಸುವ ಹಳ್ಳ ಕೊಳ್ಳಗಳಿಗೆ ಸೇರುತ್ತಿದೆ. ಕೂಡಲೇ ಪಟ್ಟಣದ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಕೈಗೊಂಡು ಸಮಸ್ಯೆ ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಪಿ.ರಾಜು, ‘ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯದಿಂದ ಪಟ್ಟಣದಲ್ಲಿ ಗಬ್ಬು ವಾಸನೆ ಬರುತ್ತಿದೆ. ಪಟ್ಟಣವು ಏರು ತಗ್ಗಿನ ಪ್ರದೇಶವೆಂಬ ಕಾರಣಕ್ಕೆ ಆಟೊಗಳಲ್ಲಿ ಕಸ ಸಂಗ್ರಹಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರತಿ ದಿನವೂ ಎಲ್ಲಾ ವಾರ್ಡ್ಗಳಿಗೆ ಕಸ ಸಂಗ್ರಹಣೆ ವಾಹನ ಬರುತ್ತಿಲ್ಲ. ಕೆಲವೊಮ್ಮೆ ವಾರಗಟ್ಟಲೇ ಆಟೊಗಳು ಡಿಸೇಲ್ ಇಲ್ಲದೇ, ರಸ್ತೆ ಬದಿಯಲ್ಲಿಯೇ ಕೆಟ್ಟು ನಿಲ್ಲುತ್ತವೆ. ಇದರಿಂದ ಅನಿವಾರ್ಯವಾಗಿ ರಸ್ತೆ ಬದಿಗೆ ಕಸ ಹಾಕುವಂತಾಗಿದೆ. ಅಧಿಕಾರಿಗಳು ಪ್ರತಿ ದಿನವೂ ಕಸದ ಗಾಡಿಯನ್ನು ಎಲ್ಲಾ ವಾರ್ಡ್ಗಳಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು’ ಎಂದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಭ್ರಾಜ್, ಜಿಲ್ಲಾ ಸಂಚಾಲಕ ಪಿ.ಕೆ. ನಾಗೇಶ್ಗೌಡ, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ತುಳಸೇಗೌಡ, ತಾಲ್ಲೂಕು ಸಂಚಾಲಕ ಡಿ.ಎಸ್. ರಮೇಶ್, ಕೃಷ್ಣ ಕಳಸ, ಪದ್ಮರಾಜ್, ಬಸವರಾಜಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-126-785654892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.