ಮೂಡಿಗೆರೆ: ತಾಲ್ಲೂಕಿನಾದ್ಯಂತ ಗುರುವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ.

ಮಳೆಯೊಂದಿಗೆ ಗಾಳಿಯೂ ಬೀಸಿದ್ದರಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತಿಕಟ್ಟೆ ರಸ್ತೆಯಲ್ಲಿ 15ಕ್ಕೂ ಹೆಚ್ಚು ಮರಗಳು ಬಿದ್ದಿದ್ದರಿಂದ ಬೆಳಗಿನವರೆಗೂ ಸಂಪರ್ಕ ಕಡಿತಗೊಂಡಿತ್ತು. ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಸ್ಥಳೀಯರು, 11ರ ಸುಮಾರಿಗೆ ಮರಗಳನ್ನು ತೆರವುಗೊಳಿಸಿದರು.

ದೇವರುಂದ, ಉಗ್ಗೇಹಳ್ಳಿ, ಕೃಷ್ಣಾಪುರ, ಗುತ್ತಿ, ದೇವರಮನೆ, ಕುಂದೂರು, ನಿಡುವಾಳೆ, ಬಾಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯುತ್ ಕಂಬಗಳು ನೆಲಕಚ್ಚಿದ್ದರಿಂದ ಈ ಭಾಗಗಳಲ್ಲಿ ಶುಕ್ರವಾರವೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಬಿ. ಹೊಸಳ್ಳಿ ಗ್ರಾಮದ ಜಯಪಾಲ್ ಎಂಬುವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇದೇ ಗ್ರಾಮದ ಅಂಗನವಾಡಿ ಶಿಕ್ಷಕಿ ಗೌರಮ್ಮ ಎಂಬುವರ ಮನೆ ಮೇಲೆ ತೆಂಗಿನ ಮರ ಬಿದ್ದು ಚಾವಣಿ, ಗೋಡೆ ಸಂಪೂರ್ಣ ಹಾನಿಯಾಗಿದ್ದು, ಯಾವುದೇ ಜೀವಾಪಾಯ ಉಂಟಾಗಿಲ್ಲ.

ಮರ್ಕಲ್ ಗ್ರಾಮದ ಮಂಜುಳಾ ಎಂಬುವರ ಮನೆಯ ಚಾವಣಿಗೂ ಹಾನಿ ಸಂಭವಿಸಿದೆ. ಹಲವು ಕಾಫಿ ತೋಟಗಳಲ್ಲಿ ಮರಬಿದ್ದು ಹಾನಿ ಸಂಭವಿಸಿದ್ದು, ಅಡಿಕೆ ಮರಗಳು ಮುರಿದು ಬಿದ್ದು ನಷ್ಟ ಉಂಟಾಗಿದೆ.

ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಿತು.

ಗುರುವಾರ ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು. ಸಂಜೆ ಮೋಡಕವಿದ ವಾತಾವರಣವುಂಟಾದರೂ ಮಳೆ ಬಂದಿರಲಿಲ್ಲ. ರಾತ್ರಿ 9ರ ವೇಳೆಗೆ ಇದ್ದಕ್ಕಿದ್ದಂತೆ ಗುಡಗು-ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಶುಕ್ರವಾರ ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-1839552537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.