₹73 ಲಕ್ಷ ಬಿಡುಗಡೆ
ಪಾರ್ಕಿಂಗ್ ತಾಣ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆ ₹73 ಲಕ್ಷ ಬಿಡುಗಡೆ ಮಾಡಿದ್ದು, ಜಾಗ ಸಮತಟ್ಟು ಮಾಡಿ ಇಂಟರ್ ಲಾಕ್ ಹೊದಿಕೆಯ ವಾಹನ ನಿಲುಗಡೆ ತಾಣ, ಚೆಕ್‌ಪೋಸ್ಟ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿ ನಡೆಸಲು ಸರ್ಕಾರ ಸೂಚನೆ ನೀಡಿದೆ. ಜಾಗ ಪ್ರವಾಸೋದ್ಯಮ ಇಲಾಖೆ ಹೆಸರಿಗೆ ಖಾತೆಯಾಗಿದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದಲ್ಲಿ ಮೊದಲ ಹಂತದಲ್ಲಿ ಕಾಮಗಾರಿ ನಡೆಯಲಿದೆ. ಚೆಕ್‌ಪೋಸ್ಟ್ ಮತ್ತು ಇತರ ಮೂಲಗಳಿಂದ ಸಂಗ್ರಹವಾಗಿರುವ ಹಣ ಕೂಡ ಪ್ರವಾಸೋದ್ಯಮ ಸಮಿತಿಯಲ್ಲಿದೆ. ಮುಂದಿನ ದಿನಗಳಲ್ಲಿ ಆ ಹಣದಲ್ಲೂ ಮೂಲಸೌಕರ್ಯ ಕಾಮಗಾರಿ ನಿರ್ವಹಿಸಬಹುದು ಎಂದು ಹೇಳಿದರು.