ಚಿಕ್ಕಮಗಳೂರು: ನಗರಸಭೆ ನೂತನ ಅಧ್ಯಕ್ಷರಾಗಿ 32ನೇ ವಾರ್ಡಿನ ಬಿಜೆಪಿ ಸದಸ್ಯೆ ಭವ್ಯಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು.

ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭವ್ಯಾ ಮಂಜುನಾಥ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಚುನಾವಣಾಕಾರಿಯಾಗಿದ್ದ ಉಪವಿಭಾಗಾಧಿಕಾರಿ ಎನ್.ವಿ.ನಟೇಶ್ ಅವರು, ಭವ್ಯಾ ಮಂಜುನಾಥ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಸಿ.ಟಿ. ರವಿ ಸೇರಿ ಅಭಿನಂದಿಸಿದರು.

ಬಳಿಕ ಮಾತನಾಡಿದ ಸಿ.ಟಿ.ರವಿ, ‘ಎನ್ಡಿಎ ಮೈತ್ರಿ ಒಪ್ಪಂದದ ಪ್ರಕಾರ ಕಡೆಯ ಅವಧಿಗೆ ಭವ್ಯಾ ಮಂಜುನಾಥ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಹಲವು ಸದಸ್ಯರು ಆಕಾಂಕ್ಷಿಗಳಾಗಿದ್ದರು. ಆದರೆ, ಭವ್ಯಾ ಮಂಜುನಾಥ್ ಹೆಸರು ಪ್ರಸ್ತಾಪವಾದಾಗ ಎಲ್ಲರೂ ಸರ್ವಾನುಮತದಿಂದ ಸಹಕರಿಸಿ ಅವಿರೋಧ ಆಯ್ಕೆ ಮಾಡಿದ್ದಾರೆ. ಸಿಕ್ಕಿರುವ ಅವಕಾಶದಲ್ಲಿ ಜನಪರ ಕಾರ್ಯಗಳನ್ನು ಭವ್ಯ ಅವರು ಮಾಡಬೇಕು’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಮಾತನಾಡಿ, ‘ಕಳೆದ 20 ವರ್ಷಗಳಿಂದ ನಗರಸಭೆ ಅಧಿಕಾರವನ್ನು ಬಿಜೆಪಿ ಹೊಂದಿದೆ. ಹಣ ಬಲ ಇದ್ದವರೇ ಅಧ್ಯಕ್ಷರಾಗುತ್ತಾರೆ ಎಂಬ ಅಭಿಪ್ರಾಯ ಭವ್ಯಾ ಅವರ ಆಯ್ಕೆಯಿಂದ ದೂರವಾಗಿದೆ. 25 ವರ್ಷಗಳ ಪಕ್ಷ ನಿಷ್ಠೆಗೆ ಇಂದು ಗೌರವ ಸಿಕ್ಕಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ, ನಗರ ಮಂಡಲ ಅಧ್ಯಕ್ಷ ಕೆ.ಎಸ್.ಪುಷ್ವರಾಜ್, ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯಕ್, ಸದಸ್ಯರಾದ ರೂಪಾ ಕುಮಾರ್, ಕವಿತಾ ಶೇಖರ್, ಸುಜಾತಾ ಶಿವಕುಮಾರ್, ಶೀಲಾ ದಿನೇಶ್, ಮಧುಕುಮಾರ್ ರಾಜ್ ಅರಸ್, ಎ.ಸಿ. ಕುಮಾರ್, ಗೋಪಿ, ವರಸಿದ್ಧಿ ವೇಣುಗೋಪಾಲ್, ಮುಖಂಡ ಕೋಟೆ ರಂಗನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-126-1858233287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.