ಸರ್ಕಾರ ನೀಡಿರುವ ವಿಶೇಷ ಅನುದಾನದಲ್ಲಿ ನಗರದಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಪೈಪ್‌ಲೈನ್ ಅಳವಡಿಕೆಗೆ ಅಗೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಎಚ್ಚರಿಕೆ ನೀಡಿದರು. ನಗರ ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗ ಮೆಸ್ಕಾಂ ಸೇರಿ ಎಲ್ಲಾ ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಮಗಾರಿ ಆರಂಭವಾಗದ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ವಹಿಸಿ ಈಗಲೇ ಪೈಪ್‌ಲೈನ್ ಅಳವಡಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಒಮ್ಮೆ ಡಾಂಬರ್ ಹಾಕಿದ ರಸ್ತೆ ಅಗೆದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದರು.