ಚಿಕ್ಕಮಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ನಗರಸಭೆ ಆವರಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ಗೌಡ ಮಾತನಾಡಿ, ‘ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಸಾಕಷ್ಟು ಕನಸು ಕಟ್ಟಿಕೊಂಡಿದ್ದಾರೆ. ಸೋರಿಕೆಗೆ ಅವಕಾಶ ನೀಡಿ ಈಗ ಪರೀಕ್ಷೆಯನ್ನೇ ರದ್ದುಗೊಳಿಸಿರುವುದು ಖಂಡನೀಯ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣಿತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕತೆ, ಸಮಾನ ಅವಕಾಶ ಹಾಗೂ ಮೆರಿಟ್ ಆಧಾರಿತ ಪ್ರವೇಶ ಕಲ್ಪಿಸುವ ಉದ್ದೇಶದಿಂದ ನೀಟ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ, ಈ ವ್ಯವಸ್ಥೆಯನ್ನೂ ಹಾಳು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಅಪನಂಬಿಕೆ ಬರುವಂತೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಕೋಚಿಂಗ್ ಮಾಫಿಯಾ, ಪರೀಕ್ಷಾ ಅಕ್ರಮ, ಹಣದ ಪ್ರಭಾವದಿಂದ ನೀಟ್ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿದೆ. 2024ರಲ್ಲಿಯೂ ನೀಟ್ ಪ್ರಶ್ನೆ ಪತ್ರಿಕೆ ವಿವಾದ ದೇಶದಾದ್ಯಂತ ಕೇಳಿ ಬಂದಿದ್ದರೂ, ವಿಷಯವನ್ನು ಮುಚ್ಚಿ ಹಾಕಿತ್ತು ಎಂದು ಆರೋಪಿಸಿದರು.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಿಲ್, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಲಾಕೇಶ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿ ನಲ್ಲೂರು, ಸಿದ್ದೇಶ್ ಲಕ್ಯಾ, ಸೀಮಾ ಬಾನು, ಅಕ್ಷಯ್ ರಾಥೋಡ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-1930049693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.