ಚಿಕ್ಕಮಗಳೂರು: ಕರುಣೆ, ಪ್ರೀತಿ, ತಾಳ್ಮೆಗೆ ಇನ್ನೊಂದು ಹೆಸರೇ ನರ್ಸಿಂಗ್ ವೃತ್ತಿ. ಈ ವೃತ್ತಿಯನ್ನು ಪ್ರೀತಿಸಿ, ಗೌರವಿಸಿದಲ್ಲಿ ಅದರಿಂದ ಸಿಗುವ ತೃಪ್ತಿ ಬೇರೆ ಯಾವ ವೃತ್ತಿಯಲ್ಲಿಯೂ ದೊರೆಯುವುದಿಲ್ಲ ಎಂದು ಆಶ್ರಯ ನರ್ಸಿಂಗ್ ಕಾಲೇಜಿನ ಅಧ್ಯಕ್ಷ ಡಿ.ಎಲ್. ವಿಜಯ್ಕುಮಾರ್ ಹೇಳಿದರು.

ನಗರ ಹೊರವಲಯದ ಆಶ್ರಯ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲ್ಯಾಫ್ಲೈಟಿಂಗ್ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನರ್ಸಿಂಗ್ ಕೋರ್ಸ್ ಅನ್ನು ಸ್ವಯಂ ಆಯ್ಕೆಮಾಡಿಕೊಂಡು ಬಂದಿದ್ದರೆ, ಅದರಲ್ಲಿ ಯಶಸ್ಸು ಖಂಡಿತ ದೊರೆಯತ್ತದೆ. ಆದರೆ, ಒತ್ತಡಕ್ಕೆ ಮಣಿದು ಆಕಸ್ಮಿಕವಾಗಿ ಬಂದಿದ್ದರೆ ನಿಮ್ಮ ಆಲೋಚನಾ ಕ್ರಮವನ್ನು ಬದಲಾಯಿಸಿಕೊಂಡು ನರ್ಸಿಂಗ್ ವೃತ್ತಿಯೆಡೆಗೆ ಮುಖಮಾಡಿ ಎಂದರು.

ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಜೀವನ ಭದ್ರತೆಗೆ ಒಂದು ದಾರಿಯಾಗಬೇಕು ಎಂಬ ದೃಷ್ಟಿಯಲ್ಲಿ ಆಶ್ರಯ ನರ್ಸಿಂಗ್ ಕಾಲೇಜು ಆರಂಭಿಸಿದ್ದು, ಗುಣಮಟ್ಟದ ಶಿಕ್ಷಣ ಇಲ್ಲಿ ದೊರೆಯುತ್ತಿದೆ. ಇಲ್ಲಿ ಓದಿದವರು ದೇಶ ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಪೋರೇಟ್ ಆಸ್ಪತ್ರೆಗಳು ನಮ್ಮಲ್ಲಿಗೆ ಬಂದು ಕ್ಯಾಂಪಸ್ ಸೆಲೆಕ್ಷನ್ ಮಾಡಿಕೊಂಡು ಹೋಗುತ್ತಿದ್ದಾರೆ. ಇಲ್ಲಿನ ಗುಣಮಟ್ಟ ಶಿಕ್ಷಣದ ಬಗ್ಗೆ ರಾಜೀವ್ ಗಾಂಧಿ ವಿವಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಸರ್ಕಾರಿ ಜಿಲ್ಲಾಸ್ಪತ್ರೆಯ ಹಿರಿಯ ಆರೋಗ್ಯ ಅಧಿಕಾರಿ ಜಲಜಾಕ್ಷಿ ಮಾತನಾಡಿ, ವೃತ್ತಿ ಪ್ರೀತಿಸುವುದಕ್ಕಿಂತ ನಮ್ಮನ್ನು ನಾವು ಮೊದಲು ಪ್ರೀತಿಸಬೇಕು. ನಮ್ಮ ತನವನ್ನು ನಾವು ಗೌರವಿಸಿಕೊಳ್ಳಬೇಕು. ಆಗ ಮಾತ್ರ ಇನ್ನೊಬ್ಬರ ಆರೋಗ್ಯ ಕಾಳಜಿ ಮಾಡಲು ಸಾಧ್ಯ. ತಾಳ್ಮೆ, ವಿಧೇಯತೆ, ಆತ್ಮವಿಶ್ವಾಸ ನಿಮ್ಮಲ್ಲಿರಬೇಕು. ಯಾವಾಗಲೂ ನಗುನಗುತ್ತಾ ಇದ್ದಲ್ಲಿ ಬಿಪಿ ನಿಮ್ಮ ಬಳಿ ಸುಳಿಯುವುದೇ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುವ ನರ್ಸಿಂಗ್ ಅಧಿಕಾರಿಗಳು ಉತ್ತಮ ನಡವಳಿಕೆ, ಸಂಸ್ಕಾರ, ಸಂಸ್ಕೃತಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲರಾದ ಬಿ.ಎಚ್. ತೇಜಸ್ವಿನಿ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಜಿ. ಪುರುಷೋತ್ತಮ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-126-179226257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.