ಚಿಕ್ಕಮಗಳೂರು: ತುಂಗಾದೇವಿ ಪ್ಲಾಂಟೇಷನ್ಸ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ವತಿಯಿಂದ ಮೇ 25ರಂದು ಸಂಜೆ 5ಕ್ಕೆ ಮೂಗ್ತಿಹಳ್ಳಿಯಲ್ಲಿ ‘ಆರೋಗ್ಯಕರ ಭವಿಷ್ಯಕ್ಕೆ ಸಾವಯವ ಕೃಷಿ ಸಂವಾದ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷೆ ರೂಪಾ ನಾಯ್ಕ ತಿಳಿಸಿದರು.

ರೈತರಿಗೆ ಆಧುನಿಕ ಕೃಷಿ, ಸಾವಯವ ಕೃಷಿ, ಬೆಳೆ ನಿರ್ವಹಣೆ, ನೀರಿನ ಸಂರಕ್ಷಣೆ ಹಾಗೂ ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ತಜ್ಞರು ಹಾಗೂ ಯಶಸ್ವಿ ರೈತರು ಭಾಗವಹಿಸಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ರೈತರು ತಮ್ಮ ಸಮಸ್ಯೆ ಹಾಗೂ ಪ್ರಶ್ನೆಗಳನ್ನು ನೇರವಾಗಿ ಕೇಳಿ ಪರಿಹಾರ ಪಡೆಯುವ ಅವಕಾಶ ಇದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-1207188546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.