ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಎ.ಕೆ.ಕುಲದೀಪ್ ಆಯ್ಕೆಯಾದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ಡಿ.ಜೋಸೆಫ್ ಮಾತ್ರ ಅವಿರೋಧವಾಗಿ ಆಯ್ಕೆಯಾಗಿದ್ದರು.

ಉಳಿದಂತೆ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 16 ಮಂದಿ ಕಣದಲ್ಲಿದ್ದರು. ಅಧ್ಯಕ್ಷರಾಗಿ ಕುಲದೀಪ್ ಎ.ಕೆ., ಮಹಿಳಾ ಮೀಸಲು ಉಪಾಧ್ಯಕ್ಷರಾಗಿ ಎಂ.ಶಾಂತಿ, ಖಜಾಂಚಿಯಾಗಿ ಆರ್.ರಾಜ್ಕುಮಾರ್, ರಾಜ್ಯ ಪರಿಷತ್ ಸದಸ್ಯರಾಗಿ ಎಚ್.ಎಂ.ಚೇತನ್, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಬಿ.ಸುರೇಶ್, ಮಹಿಳಾ ಮೀಸಲು ಸಂಘಟನಾ ಕಾರ್ಯದರ್ಶಿಯಾಗಿ ಐ.ಓ.ರುದ್ರಾಂಬಿಕ, ಕ್ರೀಡಾ ಕಾರ್ಯದರ್ಶಿಯಾಗಿ ಬಾಲಚಂದ್ರ, ಮಹಿಳಾ ಮೀಸಲು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಎಂ.ಸಿ.ಸೌಮ್ಯ ಆಯ್ಕೆಯಾಗಿದ್ದಾರೆ.

ಬಳಿಕ ಮಾತನಾಡಿದ ಎ.ಕೆ.ಕುಲದೀಪ್, ‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಮಾತನಾಡಿ, ‘ಒಂದೇ ತಂಡದಲ್ಲಿ ಗುರುತಿಸಿಕೊಂಡ ಎಲ್ಲಾ 8 ಜನ ಆಯ್ಕೆಯಾಗಿದ್ದಾರೆ. ಪಿಡಿಒ ಸಂಘದ ಜತೆಗೆ ಜಿಲ್ಲಾ ಸರ್ಕಾರಿ ನೌಕರರ ಸಂಘ ಇರುತ್ತದೆ. ಅವರ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-126-1347745899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.