ಚಿಕ್ಕಮಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದರಿಂದ ರೈತರು ಮತ್ತು ಜನ ಸಾಮಾನ್ಯರ ಮೇಲೆ ಹೊರೆಯಾಗಿದೆ. ಬೆಲೆ ಏರಿಕೆ ಕೈಬಿಡಬೇಕು ಎಂದು ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ರಘು ಒತ್ತಾಯಿಸಿದರು.

ಇಂಧನ ಬೆಲೆ ಏರಿಕೆಯಿಂದ ಎಣ್ಣೆ, ಅಕ್ಕಿ, ಬೆಳೆಕಾಳು, ಸರಕುಸಾಗಣೆ, ಹಾಗೂ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕೈಬಿಡಬೇಕೆಂದು ಪಕ್ಷ ಒತ್ತಾಯಿಸುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೇಂದ್ರ ಸರ್ಕಾರ ನಡೆಸುತ್ತಿರುವ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಸಚಿವರನ್ನು ವಜಾ ಮಾಡಬೇಕು. ಅಧಿಕಾರಿಗಳ ಮೇಲೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೆಟ್ರೋಲ್, ಡೀಸೆಲ್ ಕಡಿಮೆ ಬಳಕೆ ಮಾಡಿ ಹಾಗೂ ಒಂದು ವರ್ಷ ಚಿನ್ನ ಖರೀದಿ ಮಾಡಬೇಡಿ ಎಂದು ದೇಶದ ಜನತೆಗೆ ಪ್ರಧಾನಿ ಕರೆ ನೀಡಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಕ್ಕೆ ಬಂದು 3 ವರ್ಷ ಪೂರ್ಣಗೊಳ್ಳುತ್ತಿದ್ದರೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ಆಶ್ರಯ ಮನೆ, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ ಸಿಗುತ್ತಿಲ್ಲ. ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವಿರಾರು ನಿವೇಶನ ರಹಿತರು ಇದ್ದರೂ ಜಿಲ್ಲೆಯ 5 ಶಾಸಕರು ನಿವೇಶನ ಮತ್ತು ಜಿಲ್ಲೆಯ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಭಾರತ ಕಮ್ಯುನಿಸ್ಟ್ ಪಕ್ಷವು ಹೊರಾಟವನ್ನು ರೂಪಿಸಲು ನಿರ್ಧರಿಸಿದೆ ಎಂದು ಹೇಳಿದರು.

ಪಕ್ಷದ ಜಿಲ್ಲಾ ಘಟಕದ ಸಹಕಾರ್ಯದರ್ಶಿ ಹೆಡದಾಳ್ ಕುಮಾರ್, ಸೋಮೇಗೌಡ, ವಸಂತ್ ಕುಮಾರ್ ಸಿ.ತೇಗೂರ್, ರಮೇಶ್ ಜಿ.ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-126-1927699573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.