ಕೊಪ್ಪ: ಇ.ಆರ್.ಎಸ್.ಎಸ್ ವಾಹನ ದಲ್ಲಿ ಕರ್ತವ್ಯದಲ್ಲಿದ್ದ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಸತೀಶ್ ಕೆ.ಡಿ (52) ಮಂಗಳವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹರಿಹರಪುರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಅವರು, ಬೊಮ್ಮಲಾಪುರಕ್ಕೆ ಬುಧವಾರ ರಾತ್ರಿ ಇ.ಆರ್.ಎಸ್.ಎಸ್ ವಾಹನದಲ್ಲಿ ತೆರಳಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದ್ದರಿಂದ ವಾಹನ ಚಾಲಕ ಪ್ರವೀಣ್ ಅವರು ಸತೀಶ್ರನ್ನು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಸತೀಶ್ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದರು.

ಸತೀಶ್ 24 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತರಾಗಿ, 2017ನೇ ಸಾಲಿನ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ನೇಮಕಾತಿಯಲ್ಲಿ ಮಾಜಿ ಸೈನಿಕರ ಕೋಟಾದಡಿ ಕಾನ್ಸ್ಟೆಬಲ್ ಆಗಿ ಸೇರಿದ್ದರು. ಕೊಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, 2 ವರ್ಷದಿಂದ ಶೃಂಗೇರಿ ಪೊಲೀಸ್ ಠಾಣೆಯಲ್ಲಿಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ. ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-584591997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.