ಕಡೂರು: ‘ದೇಶದ ಸಂವಿಧಾನದ ಅಡಿಪಾಯವನ್ನೇ ಕೆಡವಿ ಹಾಕುವ, 12 ಕೋಟಿಗೂ ಹೆಚ್ಚಿನ ಜನರನ್ನು ಅನಾಥರನ್ನಾಗಿಸುವ ದೊಡ್ಡ ಸಂಚು ಎಸ್ಐಆರ್ ಹೆಸರಿನಲ್ಲಿ ನಡೆದಿದ್ದು, ಕಾರ್ಯಾಚರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮೇ 30ರಂದು ಚಿಕ್ಕಮಗಳೂರು ಪಟ್ಟಣದ ಆಜಾದ್ ಪಾರ್ಕಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ’ ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ನ ಚಿಕ್ಕಮಗಳೂರು ಜಿಲ್ಲಾ ಘಟಕದ ಧ್ಯಕ್ಷ ಮಹಮದ್ ಸಮೀವುಲ್ಲಾ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರತಿಭಟನೆಯ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಬಿಹಾರ ರಾಜ್ಯದಲ್ಲಿ ಎಸ್ಐಆರ್ ಜಾರಿಗೊಳಿಸಿ, 65 ಲಕ್ಷ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಯಿತು. ಇವರಲ್ಲಿ ದಲಿತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳ ಮಹಿಳೆಯರು ಮತ್ತು ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನಂತರದ ಬೆಳವಣಿಗೆಯಲ್ಲಿ ಮುಖ್ಯ ಚುನಾವಣಾಧಿಕಾರಿ ‘ದೇಶದಾದ್ಯಂತ 13 ರಾಜ್ಯಗಳಲ್ಲಿ ಎಸ್ಐಆರ್ ಜಾರಿ ಮಾಡುತ್ತೇವೆ’ ಎಂದು ಘೋಷಿಸಿದ್ದಾರೆ. ಇದರ ಪರಿಣಾಮ 13 ರಾಜ್ಯಗಳಲ್ಲಿ 6.5 ಕೋಟಿ ಮತದಾರರ ಹಕ್ಕನ್ನು ಕಸಿದುಕೊಂಡು ಸಂವಿಧಾನಕ್ಕೆ ಧಕ್ಕೆ ತರಲು ಹೋರಟಿದ್ದಾರೆ’ ಎಂದು ಆರೋಪಿಸಿದರು.

ಕಡೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷ ನಿರಂಜನಮೂರ್ತಿ ಮಾತನಾಡಿ, ‘ಈ ವಿಶೇಷ ಪರಿಷ್ಕರಣೆಯಿಂದ ಮತದಾರನ ಹಕ್ಕನ್ನು ಕಸಿದುಕೊಂಡು, ಕೆಲವು ರಾಜ್ಯಗಳನ್ನು ತಮ್ಮ ವಶಕ್ಕೆ ಪಡೆಯುತ್ತಿದ್ದಾರೆ. ಮುಂದೆ ರಾಜ್ಯದಲ್ಲಿಯೂ ಇದೇ ಹುನ್ನಾರ ನಡೆಸಲು ಮುಂದಾಗಿರುವ ಕಾರಣ, ಸಂವಿಧಾನವನ್ನು ದುರ್ಬಲಗೊಳಿಸಲು ಎಸ್ಐಆರ್ ಮೂಲಕ ಮತಪಟ್ಟಿ ಬದಲಾವಣೆ ಮಾಡುವವರ ವಿರುದ್ಧ ಹೋರಾಟ ನಡೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹೋರಾಟಕ್ಕೆ ರೈತ ಸಂಘಟನೆಗಳ ಸಂಪೂರ್ಣ ಬೆಂಬಲ ಇದೆ’ ಎಂದರು.

ಎದ್ದೇಳು ಕರ್ನಾಟಕ ಸಂಘದ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮುನ್ನಾ, ‘ಕರ್ನಾಟಕದಲ್ಲಿ 75 ಲಕ್ಷ ಮತದಾರರ ಹೆಸರನ್ನು ಈಗಾಗಲೇ ಮ್ಯಾಪಿಂಗ್ ಮಾಡಿ ಹೊರಗಿಡುವ ಹುನ್ನಾರ ನಡೆದಿದೆ ಎಂಬ ಮಾಹಿತಿ ಬಂದಿದ್ದು, ಇದರ ವಿರುದ್ಧ ಎದ್ದೇಳು ಕರ್ನಾಟಕ ಸಂಘಟನೆ ಹೋರಾಟದಲ್ಲಿ ಪಾಲ್ಗೊಳ್ಳಲಿದೆ’ ಎಂದರು.

ಕಡೂರು ಮದೀನಾ ಮಸೀ ದಿಯ ಅಧ್ಯಕ್ಷ ನದೀನ್ ಪಾಷಾ ಮಾತನಾಡಿದರು. ಕಡೂರು ಮದೀನ ಮಸೀ ದಿಯ ಕಾರ್ಯದರ್ಶಿ ಇಸ್ಮಾಯಿಲ್, ಮಕ್ಕಾ ಮಸೀದಿಯ ಅಧ್ಯಕ್ಷ ಇಬ್ರಾಹಿಂ, ಫೈರೋಜ್, ರೈತ ಸಂಘದ ಕಾರ್ಯದರ್ಶಿ ಬಸವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-126-1806016453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.