ಚಿಕ್ಕಮಗಳೂರು: ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತೆ ಅಭಿಯಾನ ಕಾರ್ಯಕ್ರಮದಡಿ ದ್ವಿದಳ ಧಾನ್ಯಗಳ ಮೌಲ್ಯವರ್ದನೆ ಉತ್ತೇಜಿಸಲು ಹಾಗೂ ರೈತರ ಆದಾಯ ಹೆಚ್ಚಿಸಲು ‘ದ್ವಿದಳ ಧಾನ್ಯಗಳ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಘಟಕಗಳ ಸ್ಥಾಪನೆ’ಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಘಟಕ ಹಾಗೂ ಯಂತ್ರೋಪಕರಣ, ಕಟ್ಟಡ, ಗೋದಾಮು ನಿರ್ಮಾಣಕ್ಕೆ ಮಾತ್ರ ಸಹಾಯಧನ ಸೌಲಭ್ಯ ದೊರೆಯುತ್ತದೆ. ಘಟಕ ಸ್ಥಾಪನೆಯ ಒಟ್ಟು ವೆಚ್ಚದಲ್ಲಿ ಶೇ 33ರಷ್ಟು ಸಹಾಯಧನ ಸೌಲಭ್ಯವಿದ್ದು, ಗರಿಷ್ಠ ₹25 ಲಕ್ಷದವರೆಗೆ ಪಡೆಯಲು ಅವಕಾಶವಿದೆ. ಕಟ್ಟಡ ಮತ್ತು ಗೋದಾಮು ನಿರ್ಮಾಣಕ್ಕೆ ಅರ್ಹ ಮೊತ್ತದ ಶೇ 30ರಷ್ಟು ಸಹಾಯಧನ ಬಳಸಿಕೊಳ್ಳಲು ಅವಕಾಶವಿದೆ. ಸಹಾಯಧನ ಪಡೆಯಲು ಬ್ಯಾಂಕ್ ಸಾಲ ಕಡ್ಡಾಯವಾಗಿದೆ. ಅಂತಿಮವಾಗಿ ಫಲಾನುಭವಿಯ ಆಯ್ಕೆಯು ಜಿಲ್ಲಾಮಟ್ಟದ ಚಾಲನಾ ಸಮಿತಿಯ ನಿರ್ಣಯಕ್ಕೆ ಒಳಪಟ್ಟಿದೆ.

ರೈತ ಉತ್ಪಾದಕ ಸಂಸ್ಥೆಗಳು (ಎಫ್ಪಿಒ), ಕ್ಲಸ್ಟರ್ ಮಟ್ಟದ ಒಕ್ಕೂಟಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ನೋಂದಾಯಿತ ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಯು ಅರ್ಜಿ ಸಲ್ಲಿಸಬಹುದು. ಅರ್ಹ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿಯಾಗಿರಬೇಕು ಹಾಗೂ ಕನಿಷ್ಠ 2 ವರ್ಷ ಕಾರ್ಯ ನಿರ್ವಹಿಸಿರಬೇಕು. ವೈಯಕ್ತಿಕ ಫಲಾನುಭವಿಯು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಹ ಸಂಸ್ಥೆ ಅಥವಾ ಫಲಾನುಭವಿಯು ಯೋಜನಾ ವೆಚ್ಚದ ಶೇ 15ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು. ಅರ್ಜಿಯನ್ನು ಜೂನ್ 6ರೊಳಗೆ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-126-850097669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.