ಬುಧವಾರ, ಸೆಪ್ಟೆಂಬರ್ 18, 2019
25 °C

ಮಲೆನಾಡು ಭಾಗದಲ್ಲಿ ವರ್ಷಧಾರೆ

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದ ವಿವಿಧೆಡೆ ಮಂಗಳವಾರ ಉತ್ತಮ ಮಳೆಯಾಗಿದೆ. 

ಈ ಭಾಗದಲ್ಲಿ ಎರಡು ದಿನಗಳಿಂದ ಮತ್ತೆ ವರ್ಷಧಾರೆ ಶುರುವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ರಭಸವಾಗಿ ಸುರಿದಿದೆ. ಕೊಟ್ಟಿಗೆಹಾರದಲ್ಲಿ ಬುಧವಾರ 8.6 ಸೆಂ.ಮೀ ಮಳೆಯಾಗಿದೆ.

ಚಾರ್ಮಾಡಿ ಘಾಟಿ ಭಾಗದಲ್ಲಿ  ಎರಡು ಮರಗಳು ಧರೆಗುರುಳಿವೆ. ಕಳಸ ಭಾಗದಲ್ಲಿ ಉತ್ತಮ ಮಳೆಯಾಗಿದೆ. 

ಎನ್‌.ಆರ್‌.ಪುರ ತಾಲ್ಲೂಕಿನ ವಿವಿಧೆಡೆ ಹದ ಮಳೆಯಾಗಿದೆ. ಚಿಕ್ಕಮಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದಲೂ ತುಂತುರು ಮಳೆಯಾಗಿದೆ. ಮೋಡ ಕವಿದಿದ್ದು, ಶೀತದ ವಾತಾವರಣ ಇದೆ.

Post Comments (+)