ಚಿಕ್ಕಮಗಳೂರು: ಮುಂಗಾರಿನಲ್ಲಿ ಬಿರುಗಾಳಿ ಮಳೆಗೆ ಸಂಭವನೀಯ ಅಪಾಯ,ಹಾನಿ ತಡೆಗಟ್ಟುವುದು ಹಾಗೂ ತುರ್ತು ಕ್ರಮ ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖೆಗಳ ನಡುವೆ ಸಮನ್ವಯ ಕಾಪಾಡಿಕೊಂಡು ರ್ಯಾಪಿಡ್ ರೆಸ್ಪಾನ್ಸ್ ತಂಡ ಮಾಡಿಕೊಳ್ಳಬೇಕು. ಆ ಮೂಲಕ ಅಗತ್ಯ ಇರುವ ಕಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಮಳೆಗಾಲದಲ್ಲಿ ಮತ್ತು ಪ್ರವಾಹ ಸಂಭವ ಇರುವ ಸಮಯದಲ್ಲಿ ಅಗತ್ಯ ತುರ್ತು ವ್ಯವಸ್ಥೆಗಳನ್ನು ಒದಗಿಸಲು ಕೇಂದ್ರ ಸ್ಥಾನದಲ್ಲಿ ಲಭ್ಯರಿರಬೇಕು ಎಂದು ಆದೇಶಿಸಿದ್ದಾರೆ.

ಬೀಳುವ ಸ್ಥಿತಿಯಲ್ಲಿರುವ, ಶಿಥಿಲವಾಗಿರುವ, ದುಃಸ್ಥಿತಿಯಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಮೆಸ್ಕಾಂ ವತಿಯಿಂದ ತೆರವುಗೊಳಿಸಬೇಕು. ತುರ್ತು ಸಂದರ್ಭಗಳಲ್ಲಿ, ಹಾನಿಯುಂಟಾದ ಸಂದರ್ಭಗಳಲ್ಲಿ ಕಂಬಗಳನ್ನು, ವಿದ್ಯುತ್ ತಂತಿ ಸ್ಥಳಾಂತರಿಸಬೇಕು. ನಗರ ವ್ಯಾಪ್ತಿಯಲ್ಲಿ ಬೀಳುವ ಸ್ಥಿತಿಯಲ್ಲಿರುವ ಮರ, ಕೊಂಬೆಗಳನ್ನು ಅರಣ್ಯ ಇಲಾಖೆಯಿಂದ ತೆರವು ಮಾಡಬೇಕು ಎಂದಿದ್ದಾರೆ.

ಮಳೆಹಾನಿ ತಡೆಗಟ್ಟುವ ತಂಡಕ್ಕೆ ಅಗತ್ಯ ಸುರಕ್ಷಾ ಪರಿಕರ, ಸಲಕರಣೆಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡಬೇಕು. ನಗರ ವ್ಯಾಪ್ತಿಯಲ್ಲಿ ತಗ್ಗು ಮತ್ತು ಇಳಿಜಾರು ಪ್ರದೇಶಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಮಳೆನೀರು ನಿಲ್ಲದಂತೆ, ಮನೆಗಳಿಗೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಹಳೆಯ ಸಾರ್ವಜನಿಕ ಕಟ್ಟಡಗಳನ್ನು, ಶಾಲಾ ಕಟ್ಟಡಗಳು ಹಾಗೂ ಇತರ ಅಪಾಯಕಾರಿ ಕಟ್ಟಡಗಳನ್ನು ಗುರುತಿಸಿ ಸಾರ್ವಜನಿಕರ ಬಳಕೆಗೆ ನಿಷೇಧಿಸಬೇಕು. ಶಿಥಿಲಗೊಂಡಿರುವ ಮನೆ, ಗುಡಿಸಲುಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಸ್ಥಳಾಂತರಿಸುವ ಅನಿವಾರ್ಯ ಸಂದರ್ಭಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಹೇಳಿದರು.

ಪ್ರವಾಹ ಸ್ಥಳಗಳನ್ನು ಗುರುತಿಸಿ ಅಗತ್ಯವಿರುವ ಯಂತ್ರೋಪಕರಣ, ವಾಹನಗಳನ್ನು ಕಾಯ್ದಿರಿಸಿಕೊಳ್ಳುವುದು ಮತ್ತು ಪ್ರವಾಹ ನೀರನ್ನು ಸುರಕ್ಷಿತ ದಿಕ್ಕಿನಲ್ಲಿ ಹರಿಯಲು ಅನುವಾಗುವಂತೆ ಕ್ರಮ ವಹಿಸಬೇಕು. ಪ್ರವಾಹದಿಂದ ಉಂಟಾಗಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ಕೊಳಚೆ ಪ್ರದೇಶಗಳನ್ನು ಗುರುತಿಸಿ, ಪ್ರವಾಹದಿಂದ ಕುಡಿಯುವ ನೀರಿನ ಕೊರತೆ ಉಂಟಾದರೆ ಬದಲಿ ವ್ಯವಸ್ಥೆ ಮಾಡಬೇಕು. ತಗ್ಗು ಪ್ರದೇಶದ ಜನನಿಬಿಡ ಪ್ರದೇಶಗಳಿಗೆ ಪ್ರವಾಹ ಮುನ್ಸೂಚನೆಯ ಬಗ್ಗೆ ಮಾಹಿತಿ ನೀಡಲು ತಿಳಿಸಿದ್ದಾರೆ.

ಇಲಾಖಾಧಿಕಾರಿಗಳು ಸ್ಥಳೀಯ ತಹಶೀಲ್ದಾರ್ ಸಂಪರ್ಕದಲ್ಲಿದ್ದು, ಪರಿಸ್ಥಿತಿ ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತಂದು ಪರಸ್ಪರ ಸಮಾಲೋಚಿಸಿ ಸೂಕ್ತ ಸಲಹೆ, ಸಹಕಾರವನ್ನು ತಾಲ್ಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನೀಡಬೇಕು. ನಗರ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಮೂಲಗಳು ಮತ್ತು ನೀರು ಸರಬರಾಜಿನ ವ್ಯವಸ್ಥೆಗಳು, ಘಟಕಗಳನ್ನು ತಾಂತ್ರಿಕವಾಗಿ ಪರಿಶೀಲನೆ ನಡೆಸಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ನಗರ ಪ್ರದೇಶಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1897943679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.