ನರಸಿಂಹರಾಜಪುರ: ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯಹೋಬಳಿ ವ್ಯಾಪ್ತಿಯ ಮಳೆಮಾಪನ ಕೇಂದ್ರವನ್ನು ದುರಸ್ತಿ ಪಡಿಸಲು ಕ್ರಮಕೈಗೊಳ್ಳುವಂತೆ ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಶಾಸಕ ಟಿ.ಡಿ. ರಾಜೇಗೌಡ ಸೂಚಿಸಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಮಳೆ ಮಾಪನಗಳು ಹಾನಿಗೊಂಡಿದ್ದು, ಇವುಗಳ ದುರಸ್ತಿ ಕಾರ್ಯನಿರ್ವಹಣೆಯನ್ನು ಸಪ್ತಿಕಾ ಟೆಕ್ ನಾಲಜಿಸ್ ಪ್ರೈವೇಟ್ ಲಿ., ಇನ್ ಜೆನ್ ಟೆಕ್ ನಾಲಜಿಸ್ ಪ್ರೈವೇಟ್ ಲಿ. ಮತ್ತು ಪ್ರೋಟ್ರೊನಿಕ್ಸ್ ಟೆಕ್ನಾಲಜಿಸ್ ಪ್ರೈವೇಟ್ ಲಿ. ಎಂಬ ಖಾಸಗಿ ಸಂಸ್ಥೆಗಳಿಗೆ ವಹಿಸಲಾಗಿದೆ. ಸದರಿ ಸಂಸ್ಥೆಗಳೊಂದಿಗೆ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯಿತಿ ಇಒಗಳು ಸಮನ್ವಯ ಸಾಧಿಸಿ ಹಾನಿಗೊಂಡಿರುವ ಮಳೆಮಾಪನಗಳನ್ನು ತುರ್ತಾಗಿ ದುರಸ್ತಿಪಡಿಸಲು ನಿಗಾವಹಿಸಬೇಕೆಂದು ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-126-1483985806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.