ನರಸಿಂಹರಾಜಪುರ: ತಾಲ್ಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ರಾವೂರು, ಲಿಂಗಾಪುರ ಹಾಗೂ ಜೈಲ್ ರಸ್ತೆ ವ್ಯಾಪ್ತಿಯ ನಿವಾಸಿಗಳಿಗೆ ಐದಾರು ವರ್ಷಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ತೊಡಕಾಗಿದ್ದು, ಮೆಸ್ಕಾಂ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಗ್ರಾಮಗಳ ವ್ಯಾಪ್ತಿಗೆ ವಿದ್ಯುತ್ ಪೂರೈಸಲು ಲಿಂಗಾಪುರ ಗ್ರಾಮ, ಜೈಲು ರಸ್ತೆಯ ಬಳಿಯ ಅಂಗನವಾಡಿ ಪಕ್ಕದ ವಿದ್ಯುತ್ ಪರಿವರ್ತಕಗಳು ಕೆಟ್ಟುಹೋಗಿ ಹಲವು ತಿಂಗಳು ಕಳೆದಿದ್ದರೂ ಬದಲಾಯಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ತಾಂತ್ರಿಕ ಕಾರಣಗಳಿಂದ ಇಲಾಖೆಯಿಂದ ವಿದ್ಯುತ್ ಸಮಸ್ಯೆಗೆ ಇದುವರೆಗೂ ಸಮರ್ಪಕ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರತಿ ದಿನ ಹಗಲು– ರಾತ್ರಿ ಎನ್ನದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಬೇಸಿಗೆ ಸಂದರ್ಭದಲ್ಲಿ ತೋಟಕ್ಕೆ ನೀರು ಹಾಯಿಸಲು, ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಿರುವ ಸ್ಥಳದಲ್ಲಿ ಜಂಗಲ್ ತೆರವು ಮಾಡದೆ ಹಲವು ವರ್ಷಗಳೇ ಕಳೆದಿದ್ದು, ಗಾಳಿ ಮಳೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಕೃಷಿ ಪಂಪ್ ಸೆಟ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟುಹೋಗಿ ರೈತರಿಗೆ ನಷ್ಟ ಉಂಟಾಗುತ್ತಿದೆ.

ಈ ಗ್ರಾಮಗಳ ವ್ಯಾಪ್ತಿಯಲ್ಲಿ ಭದ್ರಾಹಿನ್ನೀರು ಪ್ರದೇಶವೂ ಬರುವುದರಿಂದ ಈಗಾಗಲೇ ಕಾಡಾನೆಗಳ ಉಪಟಳ ಹೆಚ್ಚಾಗಿದ್ದೆ. ಸಂಜೆ, ರಾತ್ರಿ ವೇಳೆ ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ಈ ಗ್ರಾಮಗಳ ಜನರು ಜೀವ ಭಯದಿಂದ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಿಳಿಸುತ್ತಾರೆ.

ನಿರಂತರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಸರ್ಕಾರದ ಬೀದಿ ದೀಪದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಸೌಲಭ್ಯ ಸಮರ್ಪಕವಾಗಿ ದೊರಕದೆ ವಂಚಿತರಾಗುವಂತಾಗಿದೆ. ಈ ವ್ಯಾಪ್ತಿಯ ಪವರ್ ಮ್ಯಾನ್ ವಿದ್ಯುತ್ ಸಂಬಂಧಿಸಿದ ಗ್ರಾಮಸ್ಥರ ದೂರಿಗೆ ಸ್ಪಂದಿಸುತ್ತಿಲ್ಲ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಖಾಸಗಿ ವ್ಯಕ್ತಿಗಳನ್ನು ಕಳುಹಿಸಿ ದುರಸ್ತಿ ಮಾಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅನಧಿಕೃತ ವ್ಯಕ್ತಿಗಳು ವಿದ್ಯುತ್ ಸಮಸ್ಯೆಯನ್ನು ದುರಸ್ತಿಪಡಿಸುವಾಗ ಅವಘಡ ಉಂಟಾದರೆ ಯಾರು ಹೋಣೆ ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಗ್ರಾಮದ ಸಮಸ್ಯೆಯನ್ನು ಬಗೆಹರಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-126-1236953889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.