ಚಿಕ್ಕಮಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆ–2022 ಅನ್ನು ಸಂವಿಧಾನದ 9ನೇ ಷಡ್ಯೂಲ್ಗೆ ಸೇರಿಸಿ, ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ತಪ್ಪಿದಲ್ಲಿ ಬೆಂಗಳೂರಿನಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತ ಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ರಾಜಕೀಯ, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ನೀಡಲಾಗಿದೆ. ಈ ಹಿಂದೆ ನೀಡಿರುವುದಕ್ಕಿಂತ ಹೆಚ್ಚುವರಿ ಮೀಸಲಾತಿ ಅಗತ್ಯವಿದೆ ಎಂದು ಹೇಳಿದರು.

2004–05ರಲ್ಲಿ ಶೇ 15ರಷ್ಟು ಮೀಸಲಾತಿ ನೀಡಲಾಗಿತ್ತು. 1958ರಲ್ಲಿ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ 15 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 3 ಮೀಸಲಾತಿ ಸೇರಿದಂತೆ ಒಟ್ಟು ಶೇ 18 ಮೀಸಲಾತಿ ಜಾರಿಗೊಂಡಿದ್ದು, ಅದನ್ನೇ ಮುಂದುವರಿಸಲಾಗಿದೆ. 2022ರಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದ್ದರೂ, ಅದು ಜಾರಿಗೆ ಬರಬೇಕಾದರೆ ಸಂವಿಧಾನದ 9ನೇ ಷಡ್ಯೂಲ್ಗೆ ಸೇರಿಸಬೇಕಾಗಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ಶೇ 50ಕ್ಕಿಂತ ಹೆಚ್ಚು ಮೀಸಲಾತಿ ನೀಡಬಾರದು ಎಂದು ಹೇಳಿದೆ. ಆದರೆ, ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿರುವ ಸಮುದಾಯಗಳಿಗೆ ಹೆಚ್ಚುವರಿ ಮೀಸಲಾತಿ ನೀಡಬೇಕಾದ ಅಗತ್ಯವಿದೆ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಇದರಿಂದ ಮೀಸಲಾತಿಗೆ ತಡೆ ಉಂಟಾಗಿದೆ. 2023ರ ಮಾರ್ಚ್ನಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರು ಶೋಷಿತ ಸಮುದಾಯಗಳಿಗೆ ಶೇ 56ರಷ್ಟು ಮೀಸಲಾತಿ ಕಲ್ಪಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಬಳಿಕ ಕೇಂದ್ರ ಸರ್ಕಾರ ಗಿರಿಜನ ಕಲ್ಯಾಣ ಇಲಾಖೆಯ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿತ್ತು ಎಂದು ಹೇಳಿದರು.

ಮೀಸಲಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಬಂದ ಪರಿಣಾಮ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸೀಟುಗಳು ದೊರೆಯದಂತಾಗಿದೆ. ಇದರಿಂದ ಶೋಷಿತ ಸಮುದಾಯಗಳ ಬದುಕಿನ ಮೇಲೆ ಕರಾಳ ಅಧ್ಯಾಯ ಪ್ರಾರಂಭವಾಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ 2026ರ ಏಪ್ರಿಲ್ 16ರಂದು ಪ್ರಧಾನಿಗೆ ಪತ್ರ ಬರೆದು ಮೀಸಲಾತಿಯನ್ನು 9ನೇ ಷಡ್ಯೂಲ್ಗೆ ಸೇರಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಕೇವಲ ಪತ್ರ ಬರೆಯುವುದರಿಂದ ಪ್ರಯೋಜನವಿಲ್ಲ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆಯೇ ಹೊರತು, ಮೀಸಲಾತಿ ವಿಚಾರದಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.

ಕೇಂದ್ರ ಸಚಿವರಾಗಿರುವ ರಾಜ್ಯದ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಏಕೆ ಒತ್ತಾಯಿಸುತ್ತಿಲ್ಲವೆಂದು ಪ್ರಶ್ನಿಸಿದರು.

‘ಮೀಸಲಾತಿ ಯಾರಪ್ಪನ ಸೊತ್ತು ಅಲ್ಲ, ಭಿಕ್ಷೆಯೂ ಅಲ್ಲ; ಅದು ನಮ್ಮ ಹಕ್ಕು’ ಎಂದು ಹೇಳಿದ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ಶೇ 56ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಆದರೆ, ಕೇಂದ್ರ ಸರ್ಕಾರ ಅದನ್ನು ಜಾರಿಗೆ ತರುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು, ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ದು ಒತ್ತಡ ಹೇರಬೇಕು. ಪ್ರಧಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಮೇ 11ರಂದು ಬೆಂಗಳೂರಿನ ವಾಲ್ಮೀಕಿ ಪ್ರತಿಮೆ ಬಳಿ ಸಮಾನ ಮನಸ್ಕರ ಸಭೆ ನಡೆಸಿ, ಬಳಿಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಜನಾಂದೋಲನ ರೂಪಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಮುಖಂಡರಾದ ಮಲ್ಲೇಶ್ ಸ್ವಾಮಿ, ನಾಗಲಕ್ಷ್ಮಿ, ಲೋಲಾಕ್ಷಿಬಾಯಿ, ಹೇಮಾವತಿ, ರಾಜಪ್ಪ, ನರಸಿಂಹಯ್ಯ, ಕೃಷ್ಣಪ್ಪ, ಗಂಗಾಧರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1417438702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.