ನರಸಿಂಹರಾಜಪುರ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬರೆದ ಪತ್ರದ ಆಧಾರದ ಮೇಲೆ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಸಿಎಂಐಡಿಪಿ) ಒಟ್ಟು ₹50 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶೃಂಗೇರಿ ಕ್ಷೇತ್ರಕ್ಕೆ ₹14 ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ ಸಂಬಂಧ ಕ್ರಿಯಾ ಯೋಜನೆ ರೂಪಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದರ ಆಧಾರದ ಮೇಲೆ ಒಟ್ಟು ₹50 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ಶೃಂಗೇರಿ ಕ್ಷೇತ್ರಕ್ಕೆ ₹14 ಕೋಟಿ, ಮೂಡಿಗೆರೆ ಕ್ಷೇತ್ರಕ್ಕೆ ₹14 ಕೋಟಿ, ಚಿಕ್ಕಮಗಳೂರು ಕ್ಷೇತ್ರಕ್ಕೆ ₹10 ಕೋಟಿ, ತರೀಕೆರೆ ಕ್ಷೇತ್ರಕ್ಕೆ₹7 ಕೋಟಿ ಹಾಗೂ ಕಡೂರು ಕ್ಷೇತ್ರಕ್ಕೆ ₹5 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-126-2079190233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.