ಆಲ್ದೂರು: ಸಮೀಪದ ದೊಡ್ಡಮಾಗರವಳ್ಳಿ ಪಂಚಾಯಿತಿ ವ್ಯಾಪ್ತಿಯ ಸಾರಳ್ಳಿ ಗ್ರಾಮದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಗುರುವಾರ ಶಾಸಕಿ ನಯನಾ ಮೋಟಮ್ಮ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಸಾರಳ್ಳಿ ಸೇತುವೆ ತುಂಬ ಹಳೆಯದು ಮತ್ತು ಶಿಥಿಲಾವಸ್ಥೆ ತಲುಪಿರುವುದು ಗಮನಕ್ಕೆ ಬಂದಿದ್ದು, ಈ ಸೇತುವೆ ಬೆಳಗೋಡು– ಚಂಡಗೋಡು ಕಂಚಿನ ಕಲ್ದುರ್ಗ ಗ್ರಾಮಗಳಿಗೆ ಸಂಪರ್ಕ ಸೇತುವೆಯಾಗಿದೆ. ಆದ್ದರಿಂದ ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿ ₹2.5 ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು 1 ಕಿ.ಮೀ 300 ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಲು ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಮುದಾಬಿರ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸುರೇಶ್ ಎಚ್.ಎಸ್., ಆಲ್ದೂರು ಹೋಬಳಿ ಘಟಕದ ಅಧ್ಯಕ್ಷ ಕೆಳಗೂರು ಪೂರ್ಣೇಶ್, ಕಾರ್ಯದರ್ಶಿ ರವಿಚಂದ್ರ ಸಿ., ಚಂಡಗೋಡು ಬೂತ್ ಅಧ್ಯಕ್ಷ ರುದ್ರಯ್ಯ, ಬ್ಯಾರಿ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಎ.ಯು. ಇಬ್ರಾಹಿಂ, ಸಾರಳ್ಳಿ ಸತ್ಯನಾರಾಯಣ, ಅಖಿಲ್ ಪಾಶ, ಮುಖಂಡರಾದ ವಸಂತ್ ಆಲ್ದೂರು, ಅನೂಪ್ ಗೌಡ, ಚಂದ್ರು, ಕಲಂದರ್, ದೋಗುಡಿಗೆ ನಾಗೇಶ್, ಅರ್ಚಕ ಚಂದ್ರನಾಥ ಭಟ್, ಸಂಕೇತ್, ರುದ್ರೇಗೌಡ, ಮಧು, ಸುನಿತಾ, ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-126-80841404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.