ಚಿಕ್ಕಮಗಳೂರು: ಕೋಮು ದ್ವೇಷ ಹರಡಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲ ಮುಖಂಡರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದು ಸಂಘ ಪರಿವಾರದವರನ್ನು ಸಮಾಧಾನಪಡಿಸಲು ರಾಜ್ಯ ಸರ್ಕಾರ ಯತ್ನಿಸಿದೆ ಎಂದು ಆರೋಪಿಸಿ ಎಸ್ಡಿಪಿಐ (ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿ ಹಲವರ ಮೇಲಿನ ಕ್ರಿಮಿನಲ್ ಮೊಕದ್ದಮೆ ಹಿಂಪಡೆಯಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಈ ನಿರ್ಧಾರ ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆಯ ಮೂಲ ತತ್ವಗಳ ಮೇಲಿನ ನೇರ ದಾಳಿ. ಸರ್ಕಾರ ಈ ಕೂಡಲೇ ತನ್ನ ನಿರ್ಧಾರ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ದ್ವೇಷ ಭಾಷಣಗಳ ಮೂಲಕ ಅಶಾಂತಿ ಸೃಷ್ಟಿಸಿದವರು, ಧರ್ಮದ ಹೆಸರಿನಲ್ಲಿ ಸಮಾಜ ವಿಭಜಿಸಿದವರು, ಅಲ್ಪಸಂಖ್ಯಾತರು ಹಾಗೂ ದಲಿತರ ವಿರುದ್ಧ ನಿರಂತರವಾಗಿ ವಿಷಕಾರಿ ಭಾಷಣ ಮಾಡಿದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆದಿರುವುದು ಕಾನೂನು ಸುವ್ಯವಸ್ಥೆಗೆ ದೊಡ್ಡ ಸವಾಲಾಗಿದೆ ಎಂದರು.

‘ಅಮಾಯಕರ ಮೇಲಿನ, ಕನ್ನಡ ಹೋರಾಟಗಾರರ, ರೈತರ ವಿರುದ್ಧದ ಪ್ರಕರಣ ಹಿಂಪಡೆದಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಕೋಮು ದ್ವೇಷ ಹರಡುವವರ ವಿರುದ್ಧದ ಪ್ರಕರಣ ಹಿಂಪಡೆಯಬಾರದು’ ಎಂದು ಹೇಳಿದರು.

‘ಕೆ.ಜಿ.ಹಳ್ಳಿ, ಡಿ.ಜೆ. ಹಳ್ಳಿ, ಹುಬ್ಬಳ್ಳಿ ಸೇರಿ ಹಲವು ಪ್ರಕರಣಗಳಲ್ಲಿ ಅಮಾಯಕ ಯುವಕರು ವ್ಯವಸ್ಥೆಗೆ ಬಲಿಯಾಗಿ ಹಲವು ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳ ನೋವು ಸರ್ಕಾರಕ್ಕೆ ಕಾಣಿಸುತ್ತಿಲ್ಲವೇ’ ಎಂದು ಪ್ರಶ್ನಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮುಸ್ತಾಫಾ ಆಲ್ದೂರು, ದಂಟರಮಕ್ಕಿ ಶ್ರೀನಿವಾಸ್, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಜಿಲ್ಲಾ ಕಾರ್ಯದರ್ಶಿ ರಿಜ್ವಾನ್, ಮುಬಾರಕ್, ಗೌಸ್ ಮುನೀರ್, ಅಬ್ರಾರ್, ಶರೀಫ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-126-766888143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.