ಚಿಕ್ಕಮಗಳೂರು: ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಸಮಸ್ಯೆಯಾದ ಮಾನ್ಯತೆ ನವೀಕರಣ ವಿಚಾರವನ್ನು ಚರ್ಚಿಸಿ ಒಂದು ವಾರದಲ್ಲಿ ರಾಜ್ಯ ಮಟ್ಟದಲ್ಲಿ ತೀರ್ಮಾನಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಶಿಕ್ಷಕರ ಸಮಸ್ಯೆ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ‘ಭವಿಷ್ಯದ ಪೀಳಿಗೆಗೆ ಜ್ಞಾನ ಬಿತ್ತುವ ಕೆಲಸ ಮಾಡುತ್ತಿರುವ ಶಿಕ್ಷಕರು ಯಾವುದೇ ಸಮಸ್ಯೆಗಳಿಂದ ಬಳಲಬಾರದು. ಸಮಸ್ಯೆಗಳನ್ನು ಸರಿಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಶಿಕ್ಷಕರಿಗೆ ಗೌರವ ಸೂಚಿಸುವುದು ಅಧಿಕಾರಿಗಳ ಕರ್ತವ್ಯ. ಶಿಕ್ಷಕರಿಗೆ ಅಗೌರವ ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಕೆಲ ಸರ್ಕಾರಿ ಶಾಲೆಗಳಲ್ಲಿ ಸ್ಥಳೀಯ ಕೆಲ ಪುಂಡರು ಮದ್ಯದ ಬಾಟಲಿಗಳನ್ನು ಶಾಲಾ ಆವರಣದಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ಅದಕ್ಕೆ ಅವಕಾಶ ನೀಡದೆ ಸ್ಥಳೀಯವಾಗಿ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಅವಶ್ಯ. ಇದು ಅನೈತಿಕ ಚಟುವಟಿಕೆಗಳನ್ನು ಮಟ್ಟಹಾಕಲು ಸಹಾಯವಾಗಲಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಶಿಕ್ಷಣಾಧಿಕಾರಿ ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.