ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ವೈದ್ಯರ ಮೇಲೆ ಚಪ್ಪಲಿ ಎಸೆತ: ಒಪಿಡಿ ಬಂದ್ ಮಾಡಿ ಪ್ರತಿಭಟನೆ

Published : 10 ಸೆಪ್ಟೆಂಬರ್ 2024, 9:12 IST
Last Updated : 10 ಸೆಪ್ಟೆಂಬರ್ 2024, 9:12 IST
ಫಾಲೋ ಮಾಡಿ
Comments

ಚಿಕ್ಕಮಗಳೂರು: ಕರ್ತವ್ಯನಿರತ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಿಲಿ ಎಸೆದು ಎಳೆದಾಡಿದ್ದು, ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಹೊರ ರೋಗಿ ವಿಭಾಗ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ.

ಗಲಾಟೆಯೊಂದರಲ್ಲಿ ಗಾಯವಾಗಿ ಇರ್ಷಾದ್ ಎಂಬುವರು ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿದ್ದ ಮೂಳೆ ತಜ್ಞ ವೆಂಕಟೇಶ್ ಅವರು ತಪಾಸಣೆ ನಡೆಸುವಾಗ ಎಲ್ಲರೂ ಒಟ್ಟಿಗೇ ಒಳಗೆ ಬಂದಿದ್ದು, ಹೊರ ಹೋಗುವಂತೆ ವೈದ್ಯರು ತಿಳಿಸಿದಾಗ ಮಾತಿಗೆ ಮಾತು ಬೆಳೆದಿದೆ.

ಕುಪಿತಗೊಂಡ ಗಾಯಾಳು ಸಂಬಂಧಿ ತಸ್ಲಿಮಾ ವೈದ್ಯರ ಕೊರಳ‌ ಪಟ್ಟಿ ಹಿಡಿದು ಎಳೆದಿದ್ದಾರೆ. ಅಲ್ಲದೆ ಚಪ್ಪಲಿ ಬಿಚ್ಚಿ ಎಸೆದಿದ್ದು, ಅಲ್ಲೇ ಇದ್ದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್ ಫೋನ್ ನಲ್ಲಿ ವಿಡಿಯೊ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೂಡಲೇ ಹೊರರೋಗಿ ವಿಭಾಗ ಬಂದ್ ಮಾಡಿದ ವೈದ್ಯರು ಮತ್ತು ಸಿಬ್ಬಂದಿ, ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ ಎದುರು ಜಮಾಯಿಸಿದರು.

ವೈದ್ಯರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅಲ್ಲಿಯ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT