ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಅಭಿವೃದ್ಧಿಗೆ ಪೂರಕವಾಗಿರುವ ರಾಜ್ಯ ಸರ್ಕಾರ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಕೋಟಿ ವಿಶೇಷ ಅನುದಾನ ನೀಡಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಸೋಮವಾರ ನಲ್ಲೂರು ಪಕ್ಕದ ಕ್ರಿಶ್ಚಿಯನ್ ಬಡಾವಣೆಗೆ ಪಿಆರ್ಡಿಆರ್ ಯೋಜನೆಯಡಿ ₹50 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಬಡವರಿಗೆ ಬದುಕು ಕಟ್ಟಿಕೊಡುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡಿ, ವಾರ್ಷಿಕ ₹57 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜಾತ್ಯಾತೀತ, ಸಮಾಜವಾದಿ ಸಿದ್ಧಾಂತದ ಸಿದ್ದರಾಮಯ್ಯ ಅವರು, ಯಾವುದೇ ಧರ್ಮಕ್ಕೂ ಭೇದ ಮಾಡದೆ ದೀನ ದಲಿತರ, ಹಿಂದುಳಿದ, ಶೋಷಿತರು ಬಡವರ ಬದುಕಿಗೆ ಆದ್ಯತೆ ನೀಡಿದ್ದಾರೆ ಎಂದರು.

ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನೊಂದು ವರ್ಷದ ಒಳಗೆ ಈ ಆಸ್ಪತ್ರೆ ಬಡವರಿಗೆ ಲೋಕಾರ್ಪಣೆಯಾಗಲಿದೆ ಎಂದರು.

ಈಗಾಗಲೇ ತಲಾ ₹4 ಕೋಟಿ ವೆಚ್ಚದಲ್ಲಿ ಕ್ಷೇತ್ರಕ್ಕೆ 3 ಕೆಪಿಎಸ್ ಶಾಲೆ ಮಂಜೂರಾಗಿ ಆರಂಭಗೊಂಡಿವೆ. 500 ವಿದ್ಯಾರ್ಥಿಗಳಿರುವ ಈ ಶಾಲೆಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ಒಂದರಿಂದ ಹತ್ತನೇ ತರಗತಿವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಅದರ ಬಿಸಿ ಪ್ರಪಂಚದಾದ್ಯಂತ ತಲುಪುತ್ತಿದೆ. ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ, ನಾರಾಯಣಗುರು ಮುಂತಾದ ಮಹಾನ್ ದಾರ್ಶನಿಕರ ಹೋರಾಟದ ಫಲವಾಗಿ ಭಾರತ ದೇಶದಲ್ಲಿ ಇಂದು ಶಾಂತಿ ನೆಲೆಸಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಕಾಂಗ್ರೆಸ್ ಪಕ್ಷದ ಮುಖಂಡರಾದ ಬೆಟ್ಟಗೆರೆ ಪ್ರವೀಣ್, ಜಯರಾಜ್ ಅರಸ್, ಜೇಮ್ಸ್ ಡಿಸೋಜ, ಸಿಲ್ವೆಸ್ಟರ್, ಐ.ಡಿ ಚಂದ್ರಶೇಖರ್, ಮಹೇಶ್ವರಯ್ಯ, ಚೇತನ್, ರೇವಣ್ಣ, ಸಂಜಯ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.