ಚಿಕ್ಕಮಗಳೂರು: ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಮೇ 2ರಂದು ನಡೆಯಲಿದ್ದು, ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವ ಪಕ್ಷಗಳ ಅಭ್ಯರ್ಥಿಗಳ ಸಭೆ ನಡೆಸಿದರು. ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ, ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಸೇರಿ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

2023ರ ಶೃಂಗೇರಿ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 1,822 ಅಂಚೆ ಮತಗಳು ಚಲಾವಣೆಯಾಗಿದ್ದವು. ಎಣಿಕೆ ವೇಳೆ 279 ಮತಗಳು ತಿರಸ್ಕೃತಗೊಂಡಿವೆ. 3 ಮತಗಳು ನೋಟಾ ಎಂದು ಚಲಾವಣೆಯಾಗಿದ್ದು, ಬಾಕಿ 1,540 ಮತಗಳನ್ನು ಗಣನೆಗೆ ತೆಗೆದುಕೊಂಡು ಎಣಿಕೆ ಮಾಡಲಾಗಿತ್ತು.

201 ಮತಗಳಿಂದ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಗೆಲುವು ಸಾಧಿಸಿದ್ದರು. ಪರಾಜಿತಗೊಂಡಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಅಂಚೆ ಮತಗಳ ಮರು ಎಣಿಕೆಗೆ ಕೋರಿದರೂ ಚುನಾವಣಾಧಿಕಾರಿ ಅವಕಾಶ ನೀಡಲಿಲ್ಲ. 279 ಮತಗಳನ್ನು ತಿರಸ್ಕಾರ ಮಾಡಿರುವುದು ಅನುಮಾನ ಮೂಡಿಸಿದೆ. ಮರು ಎಣಿಕೆಗೆ ಆದೇಶ ನೀಡಬೇಕು ಎಂದು ಕೋರಿದ್ದರು.

279 ಅಂಚೆ ಮತಗಳನ್ನು ಮರು ಪರಿಶೀಲಿಸಿ ನಂತರ ಎಲ್ಲಾ ಅಂಚೆ ಮತಗಳನ್ನು ಎಣಿಕೆ ಮಾಡಿ ಹೊಸದಾಗಿ ಫಲಿತಾಂಶ ಪ್ರಕಟಿಸಬೇಕು ಎಂದು ಏ.6 ರಂದು ಹೈಕೋರ್ಟ್ ಆದೇಶಿಸಿತ್ತು. ಆಕ್ಷೇಪಣೆ ಸಲ್ಲಿಸಲು ಶಾಸಕ ರಾಜೇಗೌಡ ಸಮಯ ಕೋರಿದ್ದರಿಂದ ಎರಡು ವಾರ ಅವಕಾಶ ನೀಡಿತ್ತು. ಆಕ್ಷೇಪಣೆ ಸಲ್ಲಿಸುವ ಅವಧಿ ಏ.20ಕ್ಕೆ ಮುಕ್ತಾಯಗೊಂಡಿದ್ದು, ಎಣಿಕೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

‘ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು, ಏಜೆಂಟರ ಸಮ್ಮುಖದಲ್ಲಿ ಎಣಿಕೆ ನಡೆಯಲಿದೆ. ತಿರಸ್ಕೃತಗೊಂಡಿರುವ ಮತಗಳಲ್ಲಿ ಯಾವುದಾದರೂ ಮತಪತ್ರಗಳು ಸರಿ ಇವೆ ಎಂಬುದು ಗಮನಕ್ಕೆ ಬಂದರೆ ಈಗಾಗಲೇ ಮಾನ್ಯವಾಗಿರುವ ಮತಪತ್ರಗಳ ಜತೆಗೆ ಸೇರಿಸಿಕೊಳ್ಳಲಾಗುವುದು. ಬಳಿಕ ಎಲ್ಲಾ ಮಾನ್ಯ ಅಂಚೆ ಮತಗಳನ್ನು ಮರು ಎಣಿಕೆ ಮಾಡಲಾಗುವುದು. ಎಲ್ಲಾ ಪ್ರಕ್ರಿಯೆಯನ್ನೂ ದಾಖಲಿಸಿ ಹೈಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

2023ರಲ್ಲಿ ಘೋಷಣೆಯಾಗಿರುವ ಫಲಿತಾಂಶ ಬದಲಾಗದಿದ್ದರೆ ಎಣಿಕೆ ಮಾಡಿದ ಕಾರ್ಯವಿಧಾನಗಳ ಪ್ರಕ್ರಿಯೆ ದಾಖಲಿಸಿ ಹೈಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು. ಒಂದು ವೇಳೆ ಫಲಿತಾಂಶ ಏರುಪೇರಾದರೆ ಎಲ್ಲಾ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿ ಪೂರ್ವಾನುಮತಿ ಪಡೆದು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ಎಲ್ಲಾ ಕಾರ್ಯಗಳು ಅಭ್ಯರ್ಥಿಗಳು ಮತ್ತು ಏಜೆಂಟರ ಸಮ್ಮುಖದಲ್ಲಿ ನಡೆಯಲಿದೆ. ಮತ ಎಣಿಕೆಗಾಗಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಗೌರವ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೇ 2ರಂದು ಬೆಳಿಗ್ಗೆ 7ಗಂಟೆಗೆ ಸಗನೀಪುರ ರಸ್ತೆಯಲ್ಲಿನ ಇವಿಎಂ ವೇರ್ಹೌಸ್ನಲ್ಲಿರುವ ಸ್ಟ್ರಾಂಗ್ ರೂಂ ತೆರೆದು ಅಂಚೆ ಮತಗಳ ಪೆಟ್ಟಿಗೆಯ ಐಡಿಎಸ್ಜಿ ಕಾಲೇಜಿನ ಎಣಿಕಾ ಕೇಂದ್ರಕ್ಕೆ ತರಲಾಗುವುದು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-126-1519933784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.