ಚಿಕ್ಕಮಗಳೂರು: ‘ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಟ್ಯಾಂಪ್ ಪೇಪರ್ ಹಗರಣ ಮತ್ತು ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್ ಒತ್ತಾಯಿಸಿದರು.

ಜಲಜೀವನ ಮಿಷನ್ನಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸುವಂತೆ ದಿಶಾ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದರು. ಕಾಂಗ್ರೆಸ್ ಮುಖಂಡರಾದ ಅಂಶುಮಂತ್, ಎಚ್.ಎಂ. ಸತೀಶ್ ಅವರು ಜೆಜೆಎಂನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದಿದ್ದಾರೆ. ಅಶ್ವನ್ ಎಂಬು ವರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದಾರೆ. ಆದರೂ ತನಿಖೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಲಜೀವನ್ ಮಿಷನ್ನಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ದಾಖಲೆ ಪಡೆಯಲು ₹2.6 ಲಕ್ಷ ಖರ್ಚಾಗುತ್ತದೆ. ಹಣ ಕಟ್ಟಿದರೆ ದಾಖಲೆ ಒದಗಿಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟು ಹಣ ಕಟ್ಟಲು ಸಾಧ್ಯವಿಲ್ಲದೆ 30 ದಾಖಲೆಗಳನ್ನು ಮಾತ್ರ ಪಡೆದುಕೊಂಡು ಪರಿಶೀಲಿಸಲಾಯಿತು.

ಆದರೆ, ಜಲಜೀವನ್ ಯೋಜನೆ ಯಡಿ ಆರ್ಡಬ್ಲ್ಯುಎಸ್ ಮತ್ತು ಗುತ್ತಿಗೆದಾರರ ನಡುವೆ ಆಗಿರುವ ಒಪ್ಪಂದ ಪತ್ರಕ್ಕಾಗಿ ಪಡೆದಿರುವ ಛಾಪಾ ಕಾಗದಗಳು ನಕಲಿಯಾಗಿರುವುದು ಕಂಡು ಬಂದಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜಲಜೀವನ ಮಿಷನ್ ಕಾಮಗಾರಿ ನಡೆಯುತ್ತಿದ್ದು, ಕೆಲವೆಡೆ ಕೊಳವೆಬಾವಿ ಕೊರೆಸಲಾಗಿದೆ. ಕೊಳವೆಬಾವಿಗಳ ಆಳ ಮತ್ತು ಸರ್ಕಾರದಿಂದ ಹಣ ಸಂದಾಯವಾಗಿರುವ ಅಳತೆಯಲ್ಲಿ ವ್ಯತ್ಯಾಸಗಳು ಕಂಡುಬರುತ್ತಿದೆ ಎಂದರು.

ಈ ಕ್ಷೇತ್ರದಲ್ಲಿ ₹115 ಕೋಟಿಗೂ ಹೆಚ್ಚು ಹಣ ನೀಡಲಾಗಿದೆ. ಸದ್ಯದಲ್ಲೇ ಈ ಹಗರಣ, ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಗೆ ಹಾಗೂ ದೆಹಲಿಗೆ ತೆರಳಿ ಕೇಂದ್ರ ಸಚಿವರಿಗೆ ದೂರು ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ, ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮಾಧ್ಯಮ ಪ್ರಮುಖ್ ಕೋಟೆ ದಿನೇಶ್, ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಪ್ರಕೋಸ್ಟ ಮುಖಂಡ ಚಮಿನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-126-567466400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.