ಚಿಕ್ಕಮಗಳೂರು: ‘ಜಾಗತಿಕ ಮಟ್ಟದಲ್ಲಿ ಪರಿಸರ, ಅರಣ್ಯಗಳು ಹಾಳಾಗುತ್ತಿದ್ದು, ಅವುಗಳ ಸಂರಕ್ಷಣೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ’ ಎಂದು ವನ್ಯಜೀವಿ ಪರ ಹೋರಾಟಗಾರ ಜಿ.ವೀರೇಶ್ ತಿಳಿಸಿದರು.

ನಗರದ ಐಡಿಎಸ್ಜಿ ಸರ್ಕಾರಿ ಕಾಲೇಜಿನಲ್ಲಿ ಹಸಿರು ಫೌಂಡೇಷನ್ ಹಾಗೂ ಐಡಿಎಸ್ಜಿ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಅಭಿಯಾನದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಿನಾಶದ ಅಂಚಿನಲ್ಲಿರುವ ವನ್ಯಜೀವಿಗಳ ಮತ್ತು ಅರಣ್ಯಗಳ ಸಂರಕ್ಷಣೆಗೆ ಕಾಯ್ದೆಗಳು ಸಹಕಾರಿಯಾಗಿದೆ. ಅಪರೂಪವಾದ ವನ್ಯ ಸಂಕುಲ, ಜೀವ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲಗಳನ್ನು ನೋಡುತ್ತ ಅರಣ್ಯ ಸಂಕೀರ್ಣತೆಯನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಕಲಿಕೆಯಲ್ಲಿ ತೊಡಗಬೇಕು ಎಂದರು.

ಜಿಲ್ಲೆಯಲ್ಲಿ ಹಸಿರು ಫೌಂಡೇಷನ್ ವತಿಯಿಂದ ಪರಿಸರ ಅರಣ್ಯ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆಯೋಜನೆ ಮಾಡಿದ್ದು, ಅದರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ವನ್ಯಜೀವಿಗಳ ಸಂರಕ್ಷಣೆ ಭಾರತ ಸಂವಿಧಾನದಲ್ಲಿ ಮೂಲಭೂತ ಕರ್ತವ್ಯವಾಗಿದ್ದು, ಪ್ರತಿಯೊಬ್ಬರು ಆ ಕರ್ತವ್ಯವನ್ನು ತಪ್ಪದೆ ಪಾಲನೆ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಐಡಿಎಸ್ಜಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲೆ ಪುಷ್ಪಭಾರತಿ ಅಧ್ಯಕ್ಷತೆ ವಹಿಸಿದ್ದರು. ಹಸಿರು ಫೌಂಡೇಷನ್ ಅಧ್ಯಕ್ಷ ರತನ್ ಊರುಬಗೆ, ಉಪಾಧ್ಯಕ್ಷ ವಿನು ಪ್ರಸಾದ್, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಹೆಡಿದಾಳು, ಕೋಶಾಧಿಕಾರಿ ಸುನಿಲ್ ಊರುಬಗೆ, ಜಯಂತ್ ಊರುಬಗೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.