ಚಿಕ್ಕಮಗಳೂರು: ತರೀಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯಡಿಯ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ– ಬಾಲಕಿಯರ ವಿದ್ಯಾರ್ಥಿ ನಿಲಯಗಳ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಸಮುದಾಯದ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ (sw.kar.nic) ಮೂಲಕ ಅರ್ಜಿ ಸಲ್ಲಿಸಬಹುದು. 2026ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಭಾ ಪುರಸ್ಕಾರ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾಹಿತಿಗೆ ಮೊ: 9480843105 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಚಿಕ್ಕಮಗಳೂರು: ನಗರದ ಕಲ್ಯಾಣನಗರದ ‘ಎಲ್ ಆ್ಯಂಡ್ ಟಿ ಫೈನಾನ್ಸ್’ನಲ್ಲಿ ಇರುವ ಕಲೆಕ್ಷನ್ ಆಫೀಸರ್ ಹಾಗೂ ಸೇಲ್ಸ್ ಆಫೀಸರ್ ಹುದ್ದೆಗಳಿಗೆ ಜೂನ್ 4ರಂದು ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 21 ರಿಂದ 33 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಅಭ್ಯರ್ಥಿಗಳು 1 ಸೆಟ್ ರೆಸ್ಯೂಮ್ನೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂ: 08262-295538 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಚಿಕ್ಕಮಗಳೂರು: ರೈತರಿಗೆ ವಿತರಿಸಲು 2026-27ನೇ ಸಾಲಿನ ಆರ್.ಎಸ್.ಪಿ.ಡಿ. ಮತ್ತು ಆರ್.ಕೆ.ವಿ.ವೈ. ಯೋಜನೆಯಡಿಯಲ್ಲಿ ಸಸಿಗಳನ್ನು ಬೆಳೆಸಿದ್ದು ಜೂನ್ 3 ರಂದು ಮೂಡಿಗೆರೆ ತಾಲ್ಲೂಕಿನ ಸಬ್ಬೇನಹಳ್ಳಿ ಸಸ್ಯ ಕ್ಷೇತ್ರದಲ್ಲಿ ರಿಯಾಯಿತಿ ದರದಲ್ಲಿ (6X9 ಬ್ಯಾಗಿನ ಅಳತೆ ಸಸಿಗಳಿಗೆ ₹ 3 ಮತ್ತು 8X12 ಬ್ಯಾಗಿನ ಅಳತೆ ಸಸಿಗಳಿಗೆ - ₹6) ಮಹಾಗನಿ, ನೇರಳೆ, ಸಿಲ್ವರ್, ಅತ್ತಿ, ಪನ್ನೇರಳು, ಚರಿ, ತಪಸಿ, ಹೊನ್ನೆ, ಹೊಳೆದಾಸವಾಳ, ಛತ್ರಿಮರ ಸಸಿಗಳು ಲಭ್ಯವಿವೆ. ಮೊದಲು ಬಂದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ರೈತರು ಸಸಿ ಬೇಡಿಕೆ ಅರ್ಜಿ, ಪಹಣಿ (ಪ್ರಸಕ್ತ ಸಾಲಿನ) ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪೋನ್ ನಂಬರ್, ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ತರಬೇಕು. ಹೆಚ್ಚಿನ ವಿವರಕ್ಕೆ ಮೊ: 9972713101 ಅಥವಾ 8123981226 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಚಿಕ್ಕಮಗಳೂರು ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1717781263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.