ತರೀಕೆರೆ: ಪಟ್ಟಣದ ಸೋಮೇಶ್ವರ ಬಡಾವಣೆಯಲ್ಲಿ ಪುರಸಭೆಯಿಂದ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟಿರುವ ನಿವೇಶನದಲ್ಲಿ ನಿರ್ಮಿಸುತ್ತಿರುವ ಮೌಲಾನ ಆಜಾದ್ ಸರ್ಕಾರಿ ಶಾಲೆಯ ಕಟ್ಟಡ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ, ಪುರಸಭೆ ಸದಸ್ಯ ಟಿ.ಎಂ. ಭೋಜರಾಜ್ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಭೋಜರಾಜ್ ಮಾತನಾಡಿ, ಮೌಲಾನ ಆಜಾದ್ ಸರ್ಕಾರಿ ಶಾಲೆಯ ಕಟ್ಟಡ ₹5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿಗೆ ಕಳಪೆ ಗುಣಮಟ್ಟದ ಸಲಕರಣೆ ಬಳಸಲಾಗುತ್ತಿದೆ. ತುಕ್ಕು ಹಿಡಿದ ಕಬ್ಬಿಣ, ಮರಳು ಮತ್ತು ಎಂಸ್ಯಾಂಡ್ ಅತ್ಯಂತ ಕಳಪೆ ಗುಣಮಟ್ಟ ಹೊಂದಿವೆ ಎಂದರು.

ನಿರ್ಮಾಣವಾಗುತ್ತಿರುವ ಈ ಸರ್ಕಾರಿ ಶಾಲೆಗೆ ವಿದ್ಯಾಭ್ಯಾಸಕ್ಕಾಗಿ ನೂರಾರು ಬಡ ಮಕ್ಕಳು ದಾಖಲಾಗುತ್ತಾರೆ. ನೂರಾರು ವರ್ಷಗಳ ಕಾಲ ಬಾಳ್ವಿಕೆ ಬರುವಂತೆ ನಿರ್ಮಿಸಬೇಕಾದ ಶಾಲಾ ಕಟ್ಟಡ ಕಳಪೆಯಾಗಿ ನಿರ್ಮಾಣವಾಗುತ್ತಿರುವುದು ಇಲ್ಲಿನ ಜನರ ವಿರೋಧಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ಖಂಡಿಸಿದ್ದಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ನನಗೆ ಅವಹೇಳನಕಾರಿ ಮಾತುಗಳನ್ನು ಆಡಿ, ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ. ಅನ್ಯಾಯವನ್ನು ಖಂಡಿಸುವ, ಪ್ರತಿಭಟಿಸುವ ಮನೋಭಾವವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಟ್ಟಡದ ಕಳಪೆ ಕಾಮಗಾರಿ ವಿರೋಧಿಸಿ ಮತ್ತು ಪೊಲೀಸ್ ಅಧಿಕಾರಿಯ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಮೇ 4ರಂದು ನಾಗರಿಕ ಹೋರಾಟ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯೆ ಅರುಂಧತಿ ಜಿ.ಹೆಗಡೆ ಮಾತನಾಡಿ, ಕಳಪೆ ಕಾಮಗಾರಿಯನ್ನು ಗಮನಿಸಿಯೇ ಪ್ರತಿಭಟನೆ ನಡೆಸಲಾಗುತ್ತಿದೆ ಮತ್ತು ಪ್ರಶ್ನೆ ಮಾಡಲಾಗುತ್ತಿದೆ. ಕಟ್ಟಡ ಕಾಮಗಾರಿಯ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಮ್ಯಾಮ್ಕೋಸ್ ನಿರ್ದೇಶಕ ಟಿ.ಎಲ್. ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಡಿ.ವಿ. ಪದ್ಮರಾಜ್, ಟೌನ್ ಕೊ–ಆಪರೇಟಿವ್ ಸೊಸೈಟಿ ಅಧ್ಯಕ್ಷ ಟಿ.ವಿ. ಜಯಣ್ಣ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ್, ದಲಿತ ಸಂಘಟನೆಯ ಮುಖಂಡರಾದ ಸುನಿಲ್, ರಘು, ಹನುಮಂತು, ಮಂಜು, ಮುಖಂಡರಾದ ಸುರೇಶ್, ದಿನೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-656995962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.