ಚಿಕ್ಕಮಗಳೂರು: ‘ತ್ರಿಭಾಷಾ ಸೂತ್ರ ನೆಹರೂ ಅವರ ಕನಸು, ಇಂದಿರಾ ಗಾಂಧಿ ಅವರು ಅದಕ್ಕೆ ನೀರೆರೆದರು. ಆದರೆ, ಇದನ್ನು ಈಗಿನ ಕಾಂಗ್ರೆಸ್ನವರು ವಿರೋಧ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೋಮವಾರ ಇಲ್ಲಿ ಆರೋಪಿಸಿದರು.

ಸುದ್ದಿಗಾರರಿಗೆ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಪ್ರಾದೇಶಿಕ ಭಾಷೆಗಳಿಗೆ ಶಕ್ತಿ ತುಂಬುವ ಕೆಲಸವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಮಾಡುತ್ತಿದೆ. ಹಿಂದಿಯು ದೇಶದ ಶೇ 40ರಷ್ಟು ಜನರ ಮಾತೃಭಾಷೆಯಾಗಿದೆ. ಇದನ್ನೂ ಅರ್ಥ ಮಾಡಿಕೊಳ್ಳಬೇಕು’ ಎಂದರು.

ಕರ್ನಾಟಕದಲ್ಲಿ ಕನ್ನಡವನ್ನೇ ಮೆರೆಸಬೇಕು, ಉಳಿದ ಭಾಷೆಗಳನ್ನೂ ಕಲಿಯಲು ಅವಕಾಶ ಮಾಡಿಕೊಡಬೇಕು. ಕೆಲವರು ಇಂಗ್ಲಿಷ್ ಮೆರೆಸಿ ಕನ್ನಡ ಮರೆಸುತ್ತಿದ್ದಾರೆ. ಅದು ಸರಿಯಲ್ಲ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-2100022231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.