ಚಿಕ್ಕಮಗಳೂರು: ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ ನಿರ್ಮಿಸಿರುವ ‘ಮೈತ್ರಾದೇವಿ, ಬಿ.ಎಸ್. ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯ ಭವನ’ ಉದ್ಘಾಟನೆ ಏ. 18ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಶಿವಶಂಕರ್ ತಿಳಿಸಿದರು.

ಬಿ.ಎಸ್. ಯಡಿಯೂರಪ್ಪ ಅವರು ಸಮುದಾಯ ಭವನ ಉದ್ಘಾಟನೆ ಮಾಡಲಿದ್ದಾರೆ. ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸಭಾಂಗಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಸಚಿವ ಎಂ.ಬಿ. ಪಾಟೀಲ, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಟಿ.ಡಿ. ರಾಜೇಗೌಡ, ಎಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಭೋಜೇಗೌಡ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಎಚ್.ಎನ್. ನಂಜೇಗೌಡ, ರೇಣುಕಾರಾಧ್ಯ, ಎಂ.ಎಸ್. ನಿರಂಜನ್, ಪ್ರಧಾನ ಕಾರ್ಯದರ್ಶಿ ಶಿವಾನಂದಸ್ವಾಮಿ, ಕಾರ್ಯದರ್ಶಿ ನಂದೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-2034450204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.