ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ಎಚ್.ರಂಗಾಪುರ (ದೋರನಾಳು) ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಳಿ 80 ಚೀಲ ಗೋಧಿ ಹೂತಿದ್ದ ಪ್ರಕರಣದಲ್ಲಿ ಹಿಂದಿನ ಪ್ರಾಂಶುಪಾಲ ಬಿ.ಜೆ. ಹರೀಶ್ ಅವರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.

2022ರ ನ.7ರಿಂದ 2025ರ ಜೂನ್ 23ರವರೆಗೆ ಬಿ.ಜೆ.ಹರೀಶ್ ಅವರು ಪ್ರಾಂಶುಪಾಲರಾಗಿದ್ದರು.ಆ ಅವಧಿಯಲ್ಲೇ ಗೋಧಿ ಚೀಲ ಹೂಳಲಾಗಿದೆ ಎಂದು ಆರೋಪಿಸಲಾಗಿದೆ. ಮೇಲಾಧಿಕಾರಿಗಳ ಗಮನಕ್ಕೆ ತಾರದೆ, ಯಾವುದೇ ನಿಯಮಗಳನ್ನು ಅನುಸರಿಸದೆ ಗೋಧಿಯನ್ನು ಹೂತು ಹಾಕಿರುವುದು ಮೇಲ್ನೋಟಕ್ಕೆ ತನಿಖೆಯಿಂದ ಗೊತ್ತಾಗಿದೆ. ಆದ್ದರಿಂದ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

ಹರೀಶ್ ಅವರು ಈಗ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾಗಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಂ. ರವಿ ಅವರನ್ನು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು, ಸಮಾಜ ವಿಜ್ಞಾನ ಶಿಕ್ಷಕ ಡಿ.ಲಿಂಗರಾಜ್ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ತಿಪ್ಪಸಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.

ಇದೇ ಶಾಲೆಯ ಹೊರಗುತ್ತಿಗೆ ಅಡುಗೆ ಸಿಬ್ಬಂದಿ ವಿಶಾಲಮ್ಮ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ವಿಶಾಲಮ್ಮ ಅವರು ಮೇಲಾಧಿಕಾರಿಗಳ ಆದೇಶ ಪಾಲಿಸುವುದಿಲ್ಲ, ಗುಂಪುಗಾರಿಕೆ ಮಾಡುತ್ತಾರೆ, ಸಮಯಕ್ಕೆ ಸರಿಯಾಗಿ ಶಾಲೆಗೆ ಬರುವುದಿಲ್ಲ ಎಂಬ ಕಾರಣ ನೀಡಿ ಬಿಡುಗಡೆ ಮಾಡಲಾಗಿದೆ.

ವಿಶ್ವಮಾನವ ಡಾ.ಭೀಮರಾವ್ ಅಂಬೇಡ್ಕರ್ ರಕ್ಷಣಾ ವೇದಿಕೆ ಉಪಾಧ್ಯಕ್ಷ ಎಸ್.ಶಿವಮೂರ್ತಿ ಅವರು ನೀಡಿದ್ದ ದೂರು ಆಧರಿಸಿ ಏ.1ರಂದು ಶಾಲೆಯ ಆವರಣದಲ್ಲಿ ಅಗೆಯಲಾಗಿತ್ತು. ಆಗ ಸುಮಾರು 80 ಚೀಲದಷ್ಟು ಗೋಧಿ ಸಿಕ್ಕಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-616430972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.