ಕೊಪ್ಪ (ಚಿಕ್ಕಮಗಳೂರು): ಮಾನವ-ಪ್ರಾಣಿ ಸಂಘರ್ಷ ಕಡಿಮೆ ಮಾಡುವ ಭಾಗವಾಗಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಡುಕೋಣ ಸೆರೆ ಹಿಡಿದು ಸ್ಥಳಾಂತರ ಮಾಡಲು ಪ್ರಾಯೋಗಿಕ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಹೇಳಿದರು.

ಕಾರ್ಯಾಚರಣೆಯನ್ನು ಕೊಪ್ಪ ಎಸ್ಟೇಟ್ನಲ್ಲಿ ಗುರುವಾರ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾನ್ಯವಾಗಿ ಪುಂಡಾನೆ ಸೆರೆ ಹಿಡಿಯಲು ಸಾಕಾನೆಗಳನ್ನು ಬಳಸಲಾಗುತ್ತಿತ್ತು. ಇದೀಗ ಕಾಡುಕೋಣ ಸೆರೆಗೆ ಎರಡು ಆನೆಗಳನ್ನು ಬಳಸಲಾಗುತ್ತಿದೆ’ ಎಂದರು.

‘ಈ ತಂಡದಲ್ಲಿ ನನ್ನನ್ನು ಒಳಗೊಂಡಂತೆ ಹಿರಿಯ ಅಧಿಕಾರಿಗಳು, 6 ಮಂದಿ ತಜ್ಞ ವೈದ್ಯರು ಇದ್ದಾರೆ. ತುಂಬಾ ಎಚ್ಚರಿಕೆಯಿಂದ ಇದನ್ನು ನಿರ್ವಹಿಸಬೇಕಿದೆ’ ಎಂದರು.

ಶಾಸಕ ಟಿ.ಡಿ.ರಾಜೇಗೌಡ,ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಚಿಕ್ಕಮಗಳೂರು ಸಿಸಿಎಫ್ ಯಶ್ಪಾಲ್ ಕ್ಷೀರಸಾಗರ, ಕೊಪ್ಪ ಅರಣ್ಯ ವಿಭಾಗದ ಡಿಸಿಎಫ್ ಶಿವಶಂಕರ್, ಇಲಾಖೆ ಸಿಬ್ಬಂದಿ ಇದ್ದರು. ಮಳೆ ಕಾರಣಕ್ಕೆ ಕಾರ್ಯಾಚರಣೆ ಶುಕ್ರವಾರಕ್ಕೆ ಮುಂದೂಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-1096986360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.