ನರಸಿಂಹರಾಜಪುರ: ತಾಲ್ಲೂಕಿನ ಲಿಂಗಾಪುರ ಮತ್ತು ಹಳೇ ಮಾಕೋಡು ವ್ಯಾಪ್ತಿಯಲ್ಲಿ ಗುರುವಾರ ಒಂಟಿ ಕಾಡುಕೋಣ ಕಂಡು ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮಾಡಿಸಿದೆ.

ಹಳೇ ಮಾಕೋಡು ವ್ಯಾಪ್ತಿಯ ಎಚ್.ಬಿ.ರಘುವೀರ್ ಅವರ ತೋಟದಲ್ಲಿ ಒಂಟಿ ಕಾಡುಕೋಣ ಓಡಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ಕಾಡುಕೋಣ ಗುರುವಾರ ಮಧ್ಯಾಹ್ನ ಲಿಂಗಾಪುರ ಗ್ರಾಮದ ವ್ಯಾಪ್ತಿಯ ತೋಟದಲ್ಲಿ ಕಂಡು ಬಂದಿತ್ತು. ಸಂಜೆ ವೇಳೆಗೆ ಜೈಲ್ ಬಿಲ್ಡಿಂಗ್ ತೋಟಗೆರೆ ಗ್ರಾಮದ ಸುನಿಲ್ ಅವರ ತೋಟದಲ್ಲಿ ಕಂಡು ಬಂದಿದೆ.

ಅರಣ್ಯ ಇಲಾಖೆ ಅವರು ಹಾಗೂ ಗ್ರಾಮಸ್ಥರು ಸೇರಿ ಕಾಡಿಗೆ ಓಡಿಸುವ ಪ್ರಯತ್ನ ಮಾಡಿದರು. ನಂತರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಡಿ.ಪ್ರಸಾದ್ ಅವರ ತೋಟಕ್ಕೆ ಹೋಯಿತು ಎಂದು ಗ್ರಾಮಸ್ಥರು ತಿಳಿಸಿದರು. ಈ ಗ್ರಾಮಗಳ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಕಾಡುಕೋಣ ಕಂಡು ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-126-1295884452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.