ತರೀಕೆರೆ: ಇತ್ತೀಚೆಗೆ ತಣಿಗೆಬೈಲು ಗ್ರಾಮದ ಎ. ಲೋಕೇಶ್ ಅವರು ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಾಡುಹಂದಿಯೊಂದು ದಾಳಿ ನಡೆಸಿದ ಪರಿಣಾಮ ಅವರು ಮೃತಪಟ್ಟಿದ್ದು ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಣಿಗೆಬೈಲು ಭದ್ರಾ ವಲಯಾರಣ್ಯಾಧಿಕಾರಿ ಕಚೇರಿಗೆ ತೆರಳಿ ವಲಯಾರಣ್ಯಾಧಿಕಾರಿ ಬಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು.

ವನ್ಯಜೀವಿ ಇಲಾಖೆಯ ನಿಯಮಗಳ ಪ್ರಕಾರ ಆನೆ, ಹುಲಿ, ಚಿರತೆ ದಾಳಿಯಿಂದ ಮೃತರಾದವರಿಗೆ ಪರಿಹಾರ ನೀಡಲಾಗುತ್ತಿದೆ. ಕಾಡುಹಂದಿ ದಾಳಿಯಿಂದ ಮೃತಪಟ್ಟ ಲೋಕೇಶ್ ಅವರ ಕುಟುಂಬಕ್ಕೂ ₹20 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಾಡುಪ್ರಾಣಿಗಳು ಗ್ರಾಮಗಳಿಗೆ ನುಗ್ಗದಂತೆ ಅಭಯಾರಣ್ಯದ ಸುತ್ತಲು ರೈಲ್ವೆ ಬ್ಯಾರಿಕೇಡ್ಗಳನ್ನು ಅಳವಡಿಸಬೇಕು ಎಂದು ಅವರು ಆಗ್ರಹಿಸಿದರು. ರೈತ ಮುಖಂಡರಾದ ಡಿ. ಷಡಾಕ್ಷರಪ್ಪ, ಆರ್. ಸತ್ಯಪ್ಪ, ಪುಟ್ಟೇಗೌಡ, ಎನ್.ಎಸ್. ಹನುಮಂತಪ್ಪ, ಬಗರ್ ಹುಕುಂ ಸಮಿತಿ ಸದಸ್ಯ ಮೊಹಮ್ಮದ್ ಅಕ್ಬರ್ ಇದ್ದರು.

ಮನವಿ ಸ್ವೀಕರಿಸಿದ ವಲಯಾರಣ್ಯಾಧಿಕಾರಿ ಬಿ. ಸುಧಾಕರ್, ಎಫ್ಐಆರ್ ಹಾಗೂ ಪಶುವೈದ್ಯರ ವರದಿ ಬಂದ ನಂತರ ಉನ್ನತಾಧಿಕಾರಿಗಳ ಗಮನಕ್ಕೆ ತಂದು, ಅರಣ್ಯ ಇಲಾಖೆಯಿಂದ ಲಭ್ಯವಿರುವ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-126-1609627306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.