ಚಿಕ್ಕಮಗಳೂರು: ಮುಳ್ಳಯನಗಿರಿಯ ಹುಲ್ಲುಗಾವಲಿನಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಸೋಮವಾರ ಮಧ್ಯಾಹ್ನದಿಂದಲೇ ಬೆಂಕಿ ಹೊಗೆಯಾಡುತ್ತಿದ್ದು, ಸಂಜೆ ವೇಳೆಗೆ ಜಾಸ್ತಿಯಾಗಿದೆ. ಕವಿಕಲ್ ಗಂಡಿ ಬಳಿ ಮೊದಲಿಗೆ ಕಾಣಿಸಿಕೊಂಡ ಬೆಂಕಿ, ಅಲ್ಲಿಂದ ಇಳಿಜಾರು ಪ್ರದೇಶಕ್ಕೆ ಆವರಿಸಿಕೊಂಡಿದೆ. ಒಣಗಿರುವ ಹುಲ್ಲುಗಾವಲಿನಲ್ಲಿ ಬೆಂಕಿ ಜೋರಾಗಿ ಹೊತ್ತಿಕೊಂಡಿದೆ. ಗಾಳಿ ಕೂಡ ವೇಗವಾಗಿ ಬೀಸುತ್ತಿರುವುದರಿಂದ ಕಾಳ್ಗಿಚ್ಚು ಜೋರಾಗಿದೆ.

ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲದ ಗಿರಿ ಪ್ರದೇಶ ಆಗಿರುವುದರಿಂದ ಬೆಂಕಿ ನಂದಿಸುವುದು ಕಷ್ಟವಾಗಿದೆ. ಮತ್ತೊಂದೆಡೆ ಸೀತಾಳಯ್ಯನಗಿರಿ ಬಳಿ ಕಾಣಿಸಿಕೊಂಡು ಬೆಂಕಿ ಕೊಂಚ ಹತೋಟಿಗೆ ಬಂದಿದೆ.

ಸಂರಕ್ಷಿತ ಅರಣ್ಯವಾಗಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ನಂದಿಸುವ ಕಾರ್ಯವನ್ನು ಅರಣ್ಯ ಸಿಬ್ಬಂದಿ ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಶೋಲಾ ಅರಣ್ಯ ಮತ್ತು ವನ್ಯಜೀವಿಗಳ ತಾಣವಾಗಿರುವ ಪ್ರದೇಶಕ್ಕೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಪರಿಸರ ಪ್ರಿಯರ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.