ಚಿಕ್ಕಮಗಳೂರು: ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಮಹಿಳಾ ಮೀಸಲಾತಿ ಅತ್ಯಂತ ಗಮನಾರ್ಹವಾದುದು. ನಾರಿ ಶಕ್ತಿ ಮೂಲಕ ಸಬಲೀಕೃತ ಸಮಾಜ ಕಟ್ಟಲು ಸಾಧ್ಯ. ಮಹಿಳಾ ರಾಜಕೀಯ ಸಬಲೀಕರಣದ ವಿಷಯವು ಸಮಾನತೆ ಅಥವಾ ಪ್ರಾತಿನಿಧ್ಯಕ್ಕೆ ಸೀಮಿತವಾಗಿಲ್ಲ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲ್ ಕುಮಾರ್ ತಿಳಿಸಿದರು.

ನಾರಿ ಶಕ್ತಿ ವಂದನ ಕಾಯ್ದೆ 2023 ಸೆಪ್ಟೆಂಬರ್ನಲ್ಲಿ ಅಂಗೀಕರಿಸಲಾದ ಸಾಂವಿಧಾನಿಕ ತಿದ್ದುಪಡಿಯು ಲೋಕಸಭೆ, ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವುದನ್ನು ಖಚಿತಪಡಿಸಿದೆ. ಇದು ಇಡೀ ರಾಷ್ಟ್ರಕ್ಕೆ ಒಂದು ಐತಿಹಾಸಿಕ ಮೈಲಿಗಲ್ಲು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಹಿಳೆಯರ ಜೀವನ ಮಟ್ಟ ಸುಧಾರಿಸಲು ಉಜ್ವಲ ಯೋಜನೆ, ಸ್ವಚ್ಛ ಭಾರತ್ ಮಿಷನ್ ರೀತಿಯ ಯೋಜನೆಗಳನ್ನು ಕೇಂದ್ರ ಸರ್ಕಾರ ತಂದಿದೆ. ಹಣಕಾಸು ಮತ್ತು ಆರೋಗ್ಯ ಸಬಲೀಕರಣ ಯೋಜನೆ ಅಡಿಯಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ, 26 ವಾರಗಳ ಮಾತೃತ್ವ ರಜೆ ನೀಡಿದೆ ಎಂದರು.

ನಾರಿ ಶಕ್ತಿ ಕಾಯ್ದೆ– 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕೆ ಸಂಕಲ್ಪದ ವೇಗಕ್ಕೆ ನಿರ್ಣಾಯಕ ಹೆಜ್ಜೆಯಾಗಿದೆ. ಮುಂದಿನ ದಿನಗಳಲ್ಲಿ ಭಾರತದ ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿ ಮಾದರಿಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸವಿತಾ ರಮೇಶ್, ಕಾರ್ಯದರ್ಶಿ ಕವಿತ ಶೇಖರ್, ಪವಿತ್ರ, ನೀಲ ಪರಮೇಶ್, ವೀಣಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-213479781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.