ಚಿಕ್ಕಮಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರದಿಂದ ದೊರೆಯುವ ಅನೇಕ ಜನಪರ ಯೋಜನೆಗಳ ಮೂಲಕ ಮಹಿಳೆಯರು ಬ್ಯಾಂಕ್ಗಳಿಂದ ಸಾಲ ಸೌಲಭ್ಯ ಪಡೆದು ಸ್ವ-ಉದ್ಯೋಗ ಸ್ಥಾಪಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಹೇಳಿದರು.

ನಗರಸಭೆ ಮತ್ತು ದೀನ್ದಯಾಳ್ ಅಂತ್ಯೋದಯ ಯೋಜನೆಯಡಿ ‘ಪಿಎಂ ಸ್ವ-ನಿಧಿ’ ಮತ್ತು ಸ್ವ-ನಿಧಿ ಸೇ ಸಮೃದ್ಧಿ’ ಮಾಸಾಚರಣೆ ಅಂಗವಾಗಿ ನಗರಸಭೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ನಗರದ ಬೀದಿ–ಬದಿ ವ್ಯಾಪಾರಿಗಳಿಗೆ ಸಾಲಮೇಳ, ಆಹಾರ ಮೇಳ, ಡಿಜಿಟಲ್ ವಹಿವಾಟಿಗೆ ಉತ್ತೇಜನ, ಕ್ಯೂಆರ್ ಕೋಡ್ ಮತ್ತು ಸೌಂಡ್ ಬಾಕ್ಸ್ ವಿತರಣೆ, ಆರೋಗ್ಯ ಶಿಬಿರ, ಗುರುತಿನ ಚೀಟಿ, ಮಾರಾಟ ಪತ್ರ ವಿತರಣೆ ಹಾಗೂ ಸಾಮಾಜಿಕ ಭದ್ರತೆ ಯೋಜನೆಗಳನ್ನು ಲಿಂಕೇಜ್ ಮಾಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೀದಿ ಬದಿ ವ್ಯಾಪಾರಿಗಳ ಉದ್ದಿಮೆ ಯನ್ನು ಉತ್ತೇಜಿಸಲು ಪ್ರಾಥಮಿಕ ₹10 ಸಾವಿರ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸಕಾಲಕ್ಕೆ ಮರು ಪಾವತಿ ಮಾಡಿದವರಿಗೆ ಹೆಚ್ಚಿನ ಸಾಲ ನೀಡಿ, ತಮ್ಮ ಉದ್ದಿಮೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮೂಲಕ ಉದ್ಯೋಗಾಧಾರಿತ ಚಟುವಡಿಕೆಗಳಾದ ಕರಕುಶಲ ವಸ್ತುಗಳ ತಯಾರಿಕೆ, ಗುಡಿ ಕೈಗಾರಿಕೆ ಮುಂತಾದ ಕಸುಬುಗಳನ್ನು ಪ್ರೋತ್ಸಾಹಿಸಲು ತಲಾ ₹40 ಸಾವಿರದಂತೆ 5 ಸ್ವಸಹಾಯ ಸಂಘಗಳಿಗೆ ಸಹಾಯಧನ ನೀಡಲಾಗಿದೆ ಎಂದು ಹೇಳಿದರು.

ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂಬುದು ನಗರಸಭೆಯ ಉದ್ದೇಶವಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜನಾಧಿಕಾರಿ ಬಿಂದ್ಯಾ ಮಾತನಾಡಿ, ‘ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಖಿ ಕೇಂದ್ರ ಆರಂಭಿಸಲಾಗಿದ್ದು, ಮಹಿಳೆಯರಿಗೆ ಒಂದೇ ಸೂರಿನಡಿ ಸೇವಾ ಸೌಲಭ್ಯ ನೀಡಲಾಗುತ್ತಿದೆ. ನೊಂದ ಸಂತ್ರಸ್ತ ಮಹಿಳೆಯರಿಗೆ ಆಪ್ತಸಮಾಲೋಚನೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ವಿವರಿಸಿದರು.

ಪೊಲೀಸ್ ಇಲಾಖೆ ಜತೆಗೆ ಕಾನೂನು ನೆರವು ದೊರೆಯಲಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ನೊಂದ ಸಂತ್ರಸ್ತೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಜತೆಗೆ ತಾತ್ಕಾಲಿಕವಾಗಿ ಆಶ್ರಯ ನೀಡಲಾಗುವುದು ಎಂದರು.

ಸಂಕಷ್ಟಕ್ಕೆ ಒಳಗಾದ ಮಹಿಳೆಯರು ಮಹಿಳಾ ಸಹಾಯವಾಣಿ ಸಂಖ್ಯೆ 181 ಸಂಪರ್ಕಿಸಬಹುದು. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲ ಬಾರಿಯ ಗರ್ಭಿಣಿಯರಿಗೆ ₹5 ಸಾವಿರವನ್ನು ಎರಡು ಕಂತುಗಳಲ್ಲಿ ಪಾವತಿಸಲಾಗುತ್ತದೆ. ಎರಡನೇ ಹೆರಿಗೆಯಲ್ಲಿ ಹೆಣ್ಣು ಮಗು ಜನನವಾದರೆ ಆ ಮಹಿಳೆಗೆ ₹6 ಸಾವಿರ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಕೌಶಲ ತಜ್ಞ ಹರ್ಷ ಮಾತನಾಡಿ, ‘ಪಿಎಂ ಸ್ವ-ನಿಧಿ ಮತ್ತು ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯನ್ನು 2030ರವರೆಗೆ ವಿಸ್ತರಿಸಲಾಗಿದೆ. ಜತೆಗೆ ಸಾಲದ ಮೊತ್ತವನ್ನು ₹75 ಸಾವಿರದಿಂದ ₹3ಲಕ್ಷ ತನಕ ನೀಡಲು ಗುರಿ ಹೊಂದಲಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-126-878454166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.