ಚಿಕ್ಕಮಗಳೂರು: ನಗರದ ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ವಿಚಾರ ಈಗ ಪ್ರಧಾನಿ ಕಚೇರಿ ತಲುಪಿದೆ. ತನಿಖೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಪ್ರಧಾನ ಮಂತ್ರಿ ಕಚೇರಿ ಆದೇಶಿಸಿದೆ.

ಹಳ್ಳದ ರಾಮೇಶ್ವರ ದೇವಾಲಯ ಸೇವಾ ಸಂಘದ ಅಧ್ಯಕ್ಷರೂ ಆಗಿರುವ ಪತ್ರಕರ್ತ ದಿನೇಶ್ ಪಟವರ್ಧನ್ ಬರೆದಿದ್ದ ಪತ್ರಕ್ಕೆ ಪ್ರಧಾನಮಂತ್ರಿ ಕಚೇರಿ ಸ್ಪಂದಿಸಿದೆ.

‘ನಗರದ ರಾಮೇಶ್ವರ ನಗರ ಬಡಾವಣೆಯ ಹಳ್ಳದ ರಾಮೇಶ್ವರ ದೇವಸ್ಥಾನವು ಅತ್ಯಂತ ಪುರಾತನ ಮತ್ತು ಮಹತ್ವದ ದೇವಾಲಯವಾಗಿದೆ. ಆರು ವರ್ಷಗಳ ಹಿಂದೆ ಈ ದೇಗುಲ ನವೀಕರಣಗೊಂಡಿದೆ. ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಉದ್ಭವ ಲಿಂಗ, ಪಾರ್ವತಿ, ಗಣಪತಿ ಹಾಗೂ ಈಶ್ವರನ ಮೂರ್ತಿಗಳು ಇಲ್ಲಿ ಪ್ರಮುಖ ಆಕರ್ಷಣೆಯಾಗಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ದೇವಸ್ಥಾನದ ಮುಂಭಾಗದಲ್ಲಿ ಯಗಚಿ ಹಳ್ಳದಲ್ಲಿ ಕೊಳಚೆ ನೀರು ನಿರಂತರವಾಗಿ ಹರಿಯುತ್ತಿದೆ. ಇದರಿಂದ ಪರಿಸರ ಮಾಲಿನ್ಯದ ಜೊತೆಗೆ ಬೇಸಿಗೆಯಲ್ಲಿ ಕೆಟ್ಟ ವಾಸನೆ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು ಮತ್ತು ಭಕ್ತರಿಗೆ ತೀವ್ರ ತೊಂದರೆಯಾಗಿದೆ. ದುರ್ವಾಸನೆ ಹಾಗೂ ಆರೋಗ್ಯದ ಅಪಾಯ ಉಂಟಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದರು.

ಪತ್ರಕ್ಕೆ ಸ್ಪಂದಿಸಿರುವ ಪ್ರಧಾನ ಮಂತ್ರಿ ಕಚೇರಿ, ‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ (ಕೆಎಸ್ಪಿಸಿಬಿ) ಆದೇಶ ನೀಡಿದ್ದು, ಕೊಳಚೆ ನೀರನ್ನು ನೇರವಾಗಿ ಹರಿಬಿಡುತ್ತಿರುವ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಸೂಚಿಸಿದೆ’.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-2005900894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.