ಚಿಕ್ಕಮಗಳೂರು: ಮತ್ತಾವರದಲ್ಲಿ ಯುವಕನ ಹತ್ಯೆ

ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಗ್ರಾಮದ ಎಂ.ಎಸ್. ಪ್ರಕೃತ್ (30) ಎಂಬವರ ಹತ್ಯೆ ಬುಧವಾರ ನಡೆದಿದೆ. ತೋಟದ ಹಾದಿಯಲ್ಲಿ ರಕ್ತಸಿಕ್ತ ಮೃತದೇಹ ಪತ್ತೆಯಾಗಿದೆ.
ಪ್ರಕೃತ್ ಅವರು ಬೆಳಿಗ್ಗೆ ಕಾಫಿ ತೋಟಕ್ಕೆ ಹೋಗಿದ್ದಾಗ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಜಮೀನು ವಿಚಾರದ ವೈಷಮ್ಯದಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಶ್ವಾನ ದಳ ಸ್ಥಳ ಪರಿಶೀಲನೆ ನಡೆಸಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.