ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು| ಯೋಧ ಸಾವು: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Published 26 ಜುಲೈ 2023, 7:56 IST
Last Updated 26 ಜುಲೈ 2023, 7:56 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಹೃದಯಾಘಾತದಿಂದ ನಿಧನರಾದ ಸಿಆರ್‌ಪಿಎಪ್‌ ಯೋಧ ಅರುಣ್‌(42) ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರಿನಲ್ಲಿ ಮಂಗಳವಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

20 ವರ್ಷಗಳ ಕಾಲ ಜಮ್ಮ ಮತ್ತು ಕಾಶ್ಮೀರದಲ್ಲಿ ಕೆಲಸ ಮಾಡಿದ್ದ ಅವರು, ಎರಡು ವರ್ಷಗಳಿಂದ ಬೆಂಗಳೂರಿನ ಯಲಹಂಕದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಪತ್ನಿ ನಳಿನಾ, ಪುತ್ರ ಕಿಶೋರ್, ತಂದೆ–ತಾಯಿ ಮತ್ತು ಸೋದರರನ್ನು ಅರುಣ್ ಅಗಲಿದ್ದಾರೆ.

ಮಂಗಳವಾರ ಗ್ರಾಮಕ್ಕೆ ಮೃತದೇಹ ತರಲಾಗಿತ್ತು. ಜಿಲ್ಲಾಡಳಿತದ ಅಧಿಕಾರಿಗಳು ಯೋಧನಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT