ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ: ತಾಯಿ ಸೇರಿ ನಾಲ್ವರು ದೋಷಿ

53 ಆರೋಪಿಗಳ ಪೈಕಿ 49 ಆರೋಪಿಗಳು ನಿರ್ದೋಷಿ
Published 7 ಮಾರ್ಚ್ 2024, 15:21 IST
Last Updated 7 ಮಾರ್ಚ್ 2024, 15:21 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಶೃಂಗೇರಿಯಲ್ಲಿ 2021ರಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿದ್ದ 53 ಆರೋಪಿಗಳ ಪೈಕಿ ತಾಯಿ ಸೇರಿದಂತೆ ನಾಲ್ವರನ್ನು ದೋಷಿಗಳು ಎಂದು ಸ್ಥಳೀಯ ಕೋರ್ಟ್‌ ಆದೇಶಿಸಿದೆ. 49 ಜನರನ್ನು ಆರೋಪ ಮುಕ್ತಗೊಳಿಸಿದೆ.

ಶೃಂಗೇರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯನ್ನು ಅಕ್ರಮ ಚಟುವಟಿಕೆಗೆ ದೂಡಿದ್ದರ ಬಗ್ಗೆ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದಿನ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. 35 ಪ್ರಕರಣ ದಾಖಲಿಸಲಾಗಿತ್ತು. ತಾಯಿ ಸೇರಿ 53 ಜನರನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿತ್ತು.

ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ವಿಶೇಷ), ನಾಲ್ವರನ್ನು ತಪ್ಪಿತಸ್ಥರು ಎಂದು ಆದೇಶಿಸಿದೆ. ಮಾರ್ಚ್ 11ಕ್ಕೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ. ಸಾಕ್ಷ್ಯ ಕೊರತೆಯಿಂದ 49 ಜನರನ್ನು ಖುಲಾಸೆಗೊಳಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್‌ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT